Advertisement

 ವೇಣೂರು ಕ್ಷೇತ್ರ ಜೀರ್ಣೋದ್ಧಾರ: ವಿಶೇಷ ಅನುದಾನಕ್ಕೆ ಮನವಿ

08:46 PM Jun 10, 2019 | mahesh |

ವೇಣೂರು: ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ವಿಶೇಷ ಅನುದಾನಕ್ಕಾಗಿ ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಮನವಿ ನೀಡಿ ಒತ್ತಾಯಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್‌ ಅವರ ಮೂಲಕ, ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರ ಶಿಫಾರಸ್ಸಿನಂತೆ ಮುಖ್ಯಮಂತ್ರಿಯವನ್ನು ಭೇಟಿಯಾಗಿ ಅನುದಾನಕ್ಕೆ ಆಗ್ರಹಿಸಿದರು. ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎ. ಜಯರಾಮ ಶೆಟ್ಟಿ, ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಪಿ. ಧರಣೇಂದ್ರ ಕುಮಾರ್‌ ಮತ್ತಿತರರು ಜತೆಗಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next