ಮುಂಬೈ: ಬೀರಬಲ್ ಎಂದೇ ಖ್ಯಾತರಾಗಿದ್ದ ಹಿರಿಯ ನಟ ಸತೀಂದರ್ ಕುಮಾರ್ ಖೋಸ್ಲಾ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ಸಂಜೆ ನಿಧನರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು.
ಹೃದಯಾಘಾತದಿಂದ ಸತೀಂದರ್ ಖೋಸ್ಲಾ ನಿಧನರಾಗಿದ್ದು ಅವರ ಅಂತಿಮ ಸಂಸ್ಕಾರ ಬುಧವಾರ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
1938 ರಲ್ಲಿ ಪಂಜಾಬ್‌ನ ಗುರುದಾಸ್‌ಪುರದಲ್ಲಿ ಜನಿಸಿದ ಅವರು 1967 ರಲ್ಲಿ ಉಪ್ಕಾರ್ ಚಿತ್ರದ ಮೂಲಕ ನಟನೆಗೆ ಪಾದಾರ್ಪಣೆ ಮಾಡಿ ಹಿಂದಿ ಚಿತ್ರರಂಗದ ಜೊತೆಗೆ ಪಂಜಾಬಿ, ಭೋಜ್‌ಪುರಿ ಮತ್ತು ಮರಾಠಿ ಸಿನಿಮಾ ಸೇರಿದಂತೆ ಸುಮಾರು 500 ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಖೋಸ್ಲಾ ಅವರು ತನ್ನ ಹಾಸ್ಯ ಪಾತ್ರಗಳಲ್ಲಿ ಹೆಚ್ಚು ಹೆಸರುವಾಸಿಯಾಗಿದ್ದರು.
ಉಪಕಾರ್, ರೋಟಿ ಕಪ್ಡಾ ಔರ್ ಮಕಾನ್ ಮತ್ತು ಕ್ರಾಂತಿ ಸೇರಿದಂತೆ ಮನೋಜ್ ಕುಮಾರ್ ಅವರ ಹಲವಾರು ಚಲನಚಿತ್ರಗಳಲ್ಲಿ ಕೆಲಸ ಮಾಡಿದ್ದರು ಜೊತೆಗೆ ನಸೀಬ್, ಯಾರಾನಾ, ಹಮ್ ಹೇ ರಹೀ ಪ್ಯಾರ್ ಕೆ ಮತ್ತು ಅಂಜಾಮ್ ಮುಂತಾದ ಚಿತ್ರಗಳಲ್ಲಿಯೂ ಕಾಣಿಸಿಕೊಂಡಿದ್ದಾರೆ.
ಅಗಲಿದ ದಿಗ್ಗಜನಿಗೆ ಚಿತ್ರರಂಗ ಸೇರಿದಂತೆ ವಿವಿಧ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಇನ್ನೂ ಓದಿ: Subhas Sarkar: ಸಚಿವರನ್ನೇ ಕಚೇರಿಯಲ್ಲಿ ಕೂಡಿ ಹಾಕಿ ಪ್ರತಿಭಟಿಸಿದ ಬಿಜೆಪಿ ಕಾರ್ಯಕರ್ತರು