Advertisement

ಶಂಕರಾಭರಣಂ ನಿರ್ದೇಶಕ ವಿಶ್ವನಾಥ್‌ಗೆ ಫಾಲ್ಕೆ ಗೌರವ

03:45 AM Apr 25, 2017 | |

ನವದೆಹಲಿ: ದಕ್ಷಿಣ ಭಾರತದ ಖ್ಯಾತ ನಟ ಹಾಗೂ ನಿರ್ದೇಶಕ ಕಾಶಿನಾಧುನಿ ವಿಶ್ವನಾಥ್‌ ಅವರು ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ತೆಲುಗು, ತಮಿಳು ಹಾಗೂ ಹಿಂದಿ ಚಿತ್ರರಂಗದಲ್ಲಿ ಸಲ್ಲಿಸಿದ ಶ್ರೇಷ್ಠ ಸೇವೆಗಾಗಿ ಅವರಿಗೆ ಈ ಗೌರವ ಸಂದಿದೆ.

Advertisement

ದೇಶದ ಸಿನಿಮಾ ಕ್ಷೇತ್ರದಲ್ಲಿ ನೀಡುವ ಅತ್ಯುನ್ನತ ಗೌರವವಾಗಿರುವ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ ಪಡೆದ 48ನೇ ಸಾಧಕ ಎಂಬ ಹೆಗ್ಗಳಿಕೆಗೆ ವಿಶ್ವನಾಥ್‌ ಪಾತ್ರರಾಗಿದ್ದಾರೆ. 

ನವದೆಹಲಿಯ ವಿಜ್ಞಾನ ಭವನದಲ್ಲಿ ಮೇ 3ರಂದು ನಡೆಯುವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರಶಸ್ತಿಯು ಒಂದು ಸ್ವರ್ಣ ಕಮಲ, 10 ಲಕ್ಷ ರೂ. ನಗದು ಪುರಸ್ಕಾರವನ್ನು ಒಳಗೊಂಡಿದೆ. 

ಐದು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿರುವ ವಿಶ್ವನಾಥ್‌ ಅವರು “ಶಂಕರಾಭರಣಂ’, “ಸಾಗರ ಸಂಗಮಂ’, “ಸ್ವಾತಿ ಮುತ್ಯಂ’, “ಜಾಗ್‌ ಉಟಾ ಇನ್ಸಾನ್‌’ ಸೇರಿದಂತೆ ಹಲವು ಪ್ರಶಸ್ತಿ ವಿಜೇತ ಚಿತ್ರಗಳನ್ನು ನಿರ್ದೇಶಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next