Advertisement

ಬೆಂಗಳೂರು :  ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಟ, ರಂಗಭೂಮಿ ಕಲಾವಿದ ಕೃಷ್ಣೇಗೌಡ (80) ಅವರು ಮಂಗಳವಾರ ( ಮೇ.25) ಹೃದಯಾಘಾತದಿಂದ ನಿಧನರಾಗಿದ್ದಾರೆ.

Advertisement

ಕೆಲ ದಿನಗಳ ಹಿಂದೆ ಇವರಿಗೆ ಕೋವಿಡ್ ದೃಢಪಟ್ಟಿತ್ತು. ಬಳಿಕ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಆದರೆ ಶ್ವಾಸಕೋಶದಲ್ಲಿ ಹೆಚ್ಚು ಇನ್ಫೆಕ್ಷನ್ ಕಾಣಿಸಿಕೊಂಡಿದ್ದ ಕಾರಣ ಕೃಷ್ಣಗೌಡರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಬೆಳಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ

ಇವರ ಪುತ್ರ ಸಹ ಕೋವಿಡ್​ಗೆ ಬಲಿಯಾಗಿದ್ದರು. ಹಿರಿಯ ನಟ ಬಿ.ಎಂ.ಕೃಷ್ಣೇಗೌಡ ಅಗಲಿಕೆಗೆ ಕನ್ನಡ ಚಿತ್ರರಂಗದ ಗಣ್ಯರು, ನಟ-ನಟಿಯರು ಸಂತಾಪ ಸೂಚಿಸಿದ್ದಾರೆ..

Advertisement

Udayavani is now on Telegram. Click here to join our channel and stay updated with the latest news.

Next