Advertisement

ಬಾಲಿವುಡ್‌ ಹಿರಿಯ ನಟ ವಿಕ್ರಮ್ ಗೋಖಲೆ ನಿಧನ

03:18 PM Nov 26, 2022 | Team Udayavani |

ಮುಂಬಯಿ: ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಿವುಡ್ ಹಿರಿಯ ನಟ ವಿಕ್ರಮ್ ಗೋಖಲೆ ಶನಿವಾರ (ನ.26 ರಂದು) ನಿಧನರಾಗಿದ್ದಾರೆ ಎಂದು ವರದಿ ತಿಳಿಸಿದೆ.

Advertisement

ಇತ್ತೀಚೆಗೆ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದರಿಂದ ಪುಣೆಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಅವರು ಕೊನೆಯುಸಿರೆಳೆದಿದ್ದಾರೆ. ನಟ ವಿಕ್ರಮ್ ಗೋಖಲೆ ಪರ್ವಾನಾ, ಹಮ್ ದಿಲ್ ದೇ ಚುಕೆ ಸನಮ್, ಅಗ್ನಿಪಥ್, ಖುದಾ ಗವಾಹ್ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿದ್ದರು.

2010 ರಲ್ಲಿ ಮರಾಠಿಯಲ್ಲಿ ತೆರೆಕಂಡ ʼ ಅನುಮತಿʼ ಚಿತ್ರದಲ್ಲಿನ ಅಭಿನಯಕ್ಕಾಗಿ ಅವರಿಗೆ ಅತ್ಯುತ್ತಮ ನಟನಾಗಿ ರಾಷ್ಟ್ರ ಪ್ರಶಸ್ತಿ ಪ್ರಾಪ್ತವಾಗಿತ್ತು. ಬೆಳ್ಳಿತೆರೆ ಮಾತ್ರವಲ್ಲದೆ ಕಿರುತೆರೆಯಲ್ಲಿ ನಟಿಸಿ ಜನಪ್ರಿಯರಾಗಿದ್ದರು.

ʼಘರ್ ಆಜಾ ಪರದೇಸಿʼ, ʼಅಲ್ಪವಿರಾಮ್ʼ, ʼಜಾನಾ ನಾ ದಿಲ್ ಸೆ ದೂರ್ʼ, ʼಸಂಜೀವಿನಿ, ಇಂದ್ರಧನುಷ್ ಧಾರಾವಾಹಿಗಳಲ್ಲಿ ನಟಿಸಿದ್ದರು.2010 ರಲ್ಲಿ ʼ ಆಘಾತ್ʼ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಇತ್ತೀಚೆಗೆ ಶಿಲ್ಪಾ ಶೆಟ್ಟಿ ಅವರ ʼ ನಿಕಮ್ಮ, ಚಿತ್ರದಲ್ಲಿ ಕಾಣಿಸಿಕೊಂಡಿದ್ದರು.

 

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next