ಮುಂಬಯಿ : ಬಾಲಿವುಡ್ ಹಿರಿಯ ನಟ ವಿಕ್ರಮ್ ಗೋಖಲೆ ಅವರ ಅರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಪುತ್ರಿ ಮಾಹಿತಿ ನೀಡಿದ್ದಾರೆ.
ಬುಧವಾರ ರಾತ್ರಿ ಕೆಲವೊಂದು ಮಾಧ್ಯಮಗಳಲ್ಲಿ ನಟ ಸಾವನ್ನಪಿರುವ ಸುದ್ದಿಗಳು ಹಬ್ಬಿತ್ತು, ಅಲ್ಲದೆ ಕೆಲವೊಂದು ನಟರೂ ಕೂಡಾ ಟ್ವಿಟರ್ ನಲ್ಲಿ ಕಂಬನಿ ಸೂಚಿಸಿದ್ದರು, ಈ ಎಲ್ಲಾ ವಿಚಾರಗಳಿಗೆ ಸಂಬಂಧಿಸಿ ವಿಕ್ರಮ್ ಗೋಖಲೆ ಅವರ ಪುತ್ರಿ ಮಾಹಿತಿ ನೀಡಿದ್ದಾರೆ.
ವಿಕ್ರಮ್ ಗೋಖಲೆ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ, ಅವರ ಅರೋಗ್ಯ ಸ್ಥಿತಿ ಹದಗೆಟ್ಟಿದ್ದು ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಹೇಳುವ ಮೂಲಕ ಸಾವಿನ ವದಂತಿಗೆ ತೆರೆ ಎಳೆದಿದ್ದಾರೆ.
ಆರೋಗ್ಯ ಸಮಸ್ಯೆಗಳ ಹಿನ್ನೆಲೆಯಲ್ಲಿ ಪುಣೆಯ ಖಾಸಗಿ ಆಸ್ಪತ್ರೆಗೆ ಹಿರಿಯ ನಟ ವಿಕ್ರಮ್ ಗೋಖಲೆ ಅವರನ್ನು ದಾಖಲಿಸಲಾಗಿತ್ತು.
Related Articles
ಇದನ್ನೂ ಓದಿ: ಅನಾರೋಗ್ಯ…ಬಹುಭಾಷಾ ನಟ ಕಮಲಹಾಸನ್ ಚೆನ್ನೈ ಖಾಸಗಿ ಆಸ್ಪತ್ರೆಗೆ ದಾಖಲು