Advertisement

ಹಿರಿಯ ನಟಿ ಜಯಂತಿ ಅಸ್ವಸ್ಥ; ಆಸ್ಪತ್ರೆಗೆ ದಾಖಲು

01:52 PM Mar 26, 2018 | |

ಬೆಂಗಳೂರು: ಸ್ಯಾಂಡಲ್‌ವುಡ್‌ ಹಿರಿಯ ನಟಿ ಜಯಂತಿ ಅವರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು ಅವರನ್ನು ಸೋಮವಾರ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

ಕಳೆದ ಕೆಲ ವರ್ಷಗಳಿಂದ ಅಸ್ತಮಾದಿಂದ ಬಳಲುತ್ತಿದ್ದ 73 ಹರೆಯದ ಜಯಂತಿ ಅವರ ಆರೋಗ್ಯದಲ್ಲಿ  ಏರು ಪೇರಾಗಿದ್ದು ಕೂಡಲೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ನನ್ನ ತಾಯಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಯಾರು ಆತಂಕ ಪಡಬೇಕಾಗಿಲ್ಲ, ಅವರ ಶೀಘ್ರ ಚೇತರಿಕೆಗೆ ಪ್ರಾರ್ಥಿಸಿ  ಎಂದು ಪುತ್ರ ಕೃಷ್ಣ ಕುಮಾರ್‌ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ಜಯಂತಿ ಅವರು ಕನ್ನಡ, ತಮಿಳು, ತೆಲುಗು, ಮಲಯಾಳಂ ಮತ್ತು ಮರಾಠಿ ಯ 500 ಕ್ಕೂ ಹೆಚ್ಚು ಚಿತ್ರಗಳಲ್ಲಿ ಮನೋಜ್ಞ ಅಭಿನಯ ನೀಡಿ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದು ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ನಿರ್ಮಾಪಕಿ, ಹಿನ್ನಲೆ ಗಾಯಕಿಯಾಗಿಯೂ ಕೆಲಸ ಮಾಡಿದ ಅನುಭವ ಜಯಂತಿಯವರದ್ದು. 

Advertisement

Udayavani is now on Telegram. Click here to join our channel and stay updated with the latest news.

Next