Advertisement
ಸುಮಾರು ಮೂರು ದಶಕಕ್ಕೂ ಹೆಚ್ಚಿನ ಕಾಲ ಕನ್ನಡ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿದ್ದ ವಸಂತ ನಾಡಿಗೇರ ಅವರು ಬೆಂಗಳೂರಿನಲ್ಲಿ ಸೋಮವಾರ ಮುಂಜಾನೆ 3.15ರ ಸುಮಾರಿಗೆ ಹೃದಯಾಘಾತದಿಂದ ವಿಧಿವಶರಾದರು.
Related Articles
Advertisement
ಪತ್ರಕರ್ತ ವಸಂತ ನಾಡಿಗೇರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಹಿರಿಯ ಪತ್ರಕರ್ತರಾದ ವಸಂತ ನಾಡಿಗೇರ ಅವರ ನಿಧನ ವಾರ್ತೆ ನೋವುಂಟು ಮಾಡಿದೆ. ವಿಜಯ ಕರ್ನಾಟಕದಲ್ಲಿ ಹಿರಿಯ ಸಹಾಯಕ ಸಂಪಾದಕರಾಗಿ, ಸಂಯುಕ್ತ ಕರ್ನಾಟಕದಲ್ಲಿ ಸಂಪಾದಕರಾಗಿ, ಹೀಗೆ ಹಲವು ದಶಕಗಳಿಂದ ಪತ್ರಿಕಾರಂಗದಲ್ಲಿ ಸೇವೆಸಲ್ಲಿಸುತ್ತಿದ್ದ ವಸಂತ ನಾಡಿಗೇರ ಅವರ ಅಗಲಿಕೆಯಿಂದ ಪತ್ರಿಕಾರಂಗಕ್ಕೆ ಬಹುದೊಡ್ಡ ನಷ್ಟವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಅವರ ದುಃಖತಪ್ತ ಕುಟುಂಬ ವರ್ಗಕ್ಕೆ ಸಂತಾಪಗಳು ಎಂದಿದ್ದಾರೆ.