Advertisement
ಕಳೆದ ಕೆಲ ವಯೋಸಹಜದಿಂದ ಬಳಲುತ್ತಿದ್ದ ಅವರು ಹೃದಯಘಾತದಿಂದ ಅವರು ವಿಧಿವಶರಾದರು ಎಂದು ವರದಿಯಾಗಿದೆ.
Related Articles
Advertisement
ಸಿನಿಮಾರಂಗ:
1964ರಲ್ಲಿ ʼವೀರ ಸಂಕಲ್ಪʼ ಎಂಬ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ದ್ವಾರಕೀಶ್, ನಟರಾಗಿ, ಹಾಸ್ಯ ಕಲಾವಿದರಾಗಿ, ಪೋಷಕ ನಟನಾಗಿ ನೂರಾರು ಸಿನಿಮಾಗಳಲ್ಲಿ ಮಿಂಚಿದ್ದರು.
ದ್ವಾರಕೀಶ್ ಅವರು ಹೆಚ್ಚು ಜನಪ್ರಿಯರಾದದ್ದು ವಿಷ್ಣುವರ್ಧನ್ ಅವರೊಂದಿಗೆ ಒಂದು ಕಾಲದಲ್ಲಿ ವಿಷ್ಣುವರ್ಧನ್ ಹಾಗೂ ದ್ವಾರಕೀಶ್ ಜೋಡಿ ಕಳ್ಳ-ಕುಳ್ಳ ಎಂದೇ ಪ್ರಸಿದ್ಧವಾಗಿತ್ತು. ವಿಷ್ಣುವರ್ಧನ್ ಅವರ ಅನೇಕ ಸಿನಿಮಾದಲ್ಲಿ ಅವರು ತೆರೆ ಹಂಚಿಕೊಂಡಿದ್ದರು. ಇದರಲ್ಲಿ ʼಆಪ್ತಮಿತ್ರʼ ಸಿನಿಮಾದಲ್ಲಿನ ಇವರಿಬ್ಬರ ಅಭಿನಯ ಗಮನ ಸೆಳೆದಿತ್ತು.
ನಿರ್ಮಾಪಕರಾಗಿ:
1966ರಲ್ಲಿ ದ್ವಾರಕೀಶ್ ಅವರು ʼಮಮತೆಯ ಬಂಧನʼ ಸಿನಿಮಾವನ್ನು ಜಂಟಿಯಾಗಿ ನಿರ್ಮಾಣ ಮಾಡಿದ್ದರು. ಡಾ.ರಾಜ್‌ಕುಮಾರ್ ಅಭಿನಯದ ಮೇಯರ್ ಮುತ್ತಣ್ಣ ಎಂಬ ಸಿನಿಮಾ ನಿರ್ಮಿಸುವ ಮೂಲಕ ಸ್ವತಂತ್ರ ನಿರ್ಮಾಪಕರಾಗಿ ಕಾಲಿಟ್ಟರು. ‘ದ್ವಾರಕೀಶ್ ಚಿತ್ರ’ ಬ್ಯಾನರ್ ಅಡಿಯಲ್ಲಿ ‘ಭಾಗ್ಯವಂತರು’, ʼಮೇಯರ್ ಮುತ್ತಣ್ಣʼ, ʼಕುಳ್ಳ ಏಜೆಂಟ್ ೦೦೦ʼ, ʼಕೌಬಾಯ್ ಕುಳ್ಳʼ, ʼಸಿಂಗಪೂರಿನಲ್ಲಿ ರಾಜಾ ಕುಳ್ಳʼ, ʼಪ್ರೀತಿ ಮಾಡು ತಮಾಷೆ ನೋಡುʼ ಹೀಗೆ ಸುಮಾರು 40 ಕ್ಕೂ ಹೆಚ್ಚಿನ ಸಿನಿಮಾಗಳನ್ನು ನಿರ್ಮಿಸಿದ್ದರು.
ನಿರ್ದೇಶನ:
1985ರಲ್ಲಿ ʼ ನೀ ಬರೆದ ಕಾದಂಬರಿʼ ಎಂಬ ಚಿತ್ರವನ್ನು ನಿರ್ದೇಶಿಸುವ ಮೂಲಕ ನಿರ್ದೇಶನ ಕ್ಷೇತ್ರಕ್ಕೆ ಕಾಲಿಟ್ಟರು. ಆ ಬಳಿಕ ನಂತರʼ ಡಾನ್ಸ್ ರಾಜ ಡಾನ್ಸ್ʼ, ʼಶ್ರುತಿ ಹಾಕಿದ ಹೆಜ್ಜೆʼ, ʼರಾಯರು ಬಂದರು ಮಾವನ ಮನೆಗೆʼ, ‘ಮಜ್ನು’, ‘ಗಿಡ್ಡು ದಾದ’, ʼಕಿಡ್ನಾಪ್ʼ, ʼಕಿಲಾಡಿಗಳುʼ ಸೇರಿದಂತೆ ಅನೇಕ ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದರು.
ನಟರಾಗಿ: ‘ಜನ್ಮರಹಸ್ಯ’, ‘ಮಂಕುತಿಮ್ಮ’, ‘ಪೆದ್ದ ಗೆದ್ದ’, ‘ಕಿಟ್ಟು ಪುಟ್ಟು’, ‘ಸಿಂಗಾಪುರದಲ್ಲಿ ರಾಜಾಕುಳ್ಳ’, ‘ಆಪ್ತಮಿತ್ರ’, ‘ಪ್ರಚಂಡ ಕುಳ್ಳ’, ‘ಗುರುಶಿಷ್ಯರು’, ‘ಆಟಗಾರ’, ‘ವಿಷ್ಣುವರ್ಧನ್’ ಹೀಗೆ ನೂರಾರು ಚಿತ್ರಗಳಲ್ಲಿ ನಟಿಸಿದ್ದಾರೆ. ಕೊನೆಯದಾಗಿ ಅವರು ʼಚೌಕʼ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು.