Advertisement

ಪ್ರಖ್ಯಾತ ಹಿನ್ನೆಲೆ ಗಾಯಕಿ ವಾಣಿ ಜಯರಾಮ್ ವಿಧಿವಶ

05:41 PM Feb 04, 2023 | Team Udayavani |

ಚೆನ್ನೈ : ಹಲವು ಭಾಷೆಗಳಲ್ಲಿ 10,000 ಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದ ಪ್ರಖ್ಯಾತ ಹಿರಿಯ ಹಿನ್ನೆಲೆ ಗಾಯಕಿ ವಾಣಿ ಜೈರಾಮ್ ಅವರು ಫೆಬ್ರವರಿ 4 ರಂದು ನಿಧನ ಹೊಂದಿದ್ದಾರೆ. ಅವರಿಗೆ 77 ವರ್ಷ ವಯಸ್ಸಾಗಿತ್ತು.

Advertisement

ಚೆನ್ನೈನ ನುಂಗಂಬಾಕ್ಕಂನ ಹ್ಯಾಡೋಸ್ ರಸ್ತೆಯಲ್ಲಿರುವ ಅವರ ಮನೆಯಲ್ಲಿ ನಿಧನ ಹೊಂದಿದ್ದಾರೆ. ಅವರ ಹಣೆಯ ಮೇಲೆ ಗಾಯವಾಗಿದೆ ಎಂದು ವರದಿಗಳು ತಿಳಿಸಿವೆ.

ಹೆಸರಾಂತ ಗಾಯಕಿ ಐದು ದಶಕಗಳ ಕಾಲದ ವೃತ್ತಿಜೀವನದಲ್ಲಿ,ಕನ್ನಡ,ತಮಿಳು, ಹಿಂದಿ, ತೆಲುಗು, ಮಲಯಾಳಂ, ಅಸ್ಸಾಮಿ ಮತ್ತು ಬೆಂಗಾಲಿ ಸೇರಿದಂತೆ ಹಲವು ಭಾಷೆಗಳಾದ್ಯಂತ ಸಾವಿರಾರು ಹಾಡುಗಳಿಗೆ ಧ್ವನಿಯಾಗಿದ್ದರು.

ವಾಣಿ ಜೈರಾಮ್ ಅವರು ಇತ್ತೀಚೆಗೆ ವೃತ್ತಿಪರ ಗಾಯಕಿಯಾಗಿ 50 ವರ್ಷಗಳನ್ನು ಪೂರೈಸಿದ್ದರು ಮತ್ತು 10,000 ಕ್ಕೂ ಹೆಚ್ಚು ಹಾಡುಗಳನ್ನು ರೆಕಾರ್ಡ್ ಮಾಡಿದ್ದಾರೆ. ಅವರು ಇಳಯರಾಜ, ಆರ್‌ಡಿ ಬರ್ಮನ್, ಕೆ ವಿ ಮಹದೇವನ್, ಓಪಿ ನಯ್ಯರ್ ಮತ್ತು ಮದನ್ ಮೋಹನ್ ಸೇರಿದಂತೆ ಇತರ ಪ್ರಸಿದ್ಧ ಸಂಯೋಜಕರೊಂದಿಗೆ ಕೆಲಸ ಮಾಡಿದ್ದರು. ಇತ್ತೀಚೆಗೆ ಅವರಿಗೆ ಅತ್ಯುನ್ನತ ಪದ್ಮಭೂಷಣ ಪ್ರಶಸ್ತಿಯನ್ನು ಘೋಷಿಸಲಾಗಿತ್ತು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next