Advertisement

ಹಿರಿಯ ರಂಗ ಕಲಾವಿದೆ ಲಕ್ಷ್ಮೀ ಬಾಯಿ ಏಣಗಿ ನಿಧನ

01:08 PM May 04, 2022 | Team Udayavani |

ಧಾರವಾಡ: ಪ್ರಸಿದ್ದ ರಂಗ ಕಲಾವಿದೆ ಹಾಗೂ ದಿ. ಏಣಗಿ ಬಾಳಪ್ಪ ಅವರ ಧರ್ಮ ಪತ್ನಿ ಶ್ರೀಮತಿ ಲಕ್ಷ್ಮಿಬಾಯಿ ಬಾಳಪ ಏಣಗಿ (96)   ಮಂಗಳವಾರ ಇಲ್ಲಿನ ರಜತಗಿರಿ ನಿವಾಸದಲ್ಲಿ ನಿಧನರಾದರು.

Advertisement

ಅವರ ಅಂತ್ಯ ಕ್ರಿಯೆ ಇಂದು ಮಧ್ಯಾಹ್ನ 2:೦೦ ಗಂಟೆಗೆ ಹೋಸಯಲಾಪೂರ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

ಚಿತ್ರನಟ ದಿ. ನಟರಾಜ ಏಣಗಿ ಹಾಗೂ ಓರ್ವಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅವರು ಅಗಲಿದ್ದಾರೆ.

1940-50 ರ ದಶಕದಲ್ಲಿ ಕನ್ನಡ ಮತ್ತು ಮರಾಠಿ ರಂಗಭೂಮಿಯಲ್ಲಿ ಪ್ರಸಿದ್ದ ನಟಿಯಾಗಿದ್ದ ಅವರು ಕರ್ನಾಟಕದ ಏಕೀಕರಣ ಚಳುವಳಿ ಆರಂಭವಾದಾಗ  ತಮ್ಮ ನಾಟಕಗಳ ಮೂಲಕವೇ ಕನ್ನಡ ಕಟ್ಟುವ ಕೆಲಸ ಮಾಡಿದರು.

ಸಿಂಗಾರೆವ್ವ ಮತ್ತು ಅರಮನೆ ಸೇರಿದಂತೆ ಹತ್ತಾರು ಕನ್ನಡ ಸಿನಿಮಾಗಳಲ್ಲಿ ನಟಿಸಿರುವ ಅವರು ಇಡೀ ತಮ್ಮ ಜೀವನವನ್ನೇ ರಂಗಭೂಮಿಗಾಗಿ ಮುಡುಪಾಗಿಟ್ಟಿದ್ದರು.

Advertisement

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಗುಬ್ಬಿ ವೀರಣ್ಣ ಪ್ರಶಸ್ತಿ, ನೂರಕ್ಕೂ ಹೆಚ್ಚು ರಂಗ ಸನ್ಮಾನಗಳು ಅವರ ಮುಡಿಗೇರಿದ್ದವು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next