Advertisement

ರೈತರ ಮನೆ ಬಾಗಿಲಿಗೆ ಪಶು ವೈದ್ಯಕೀಯ ಸೇವೆ

07:31 PM Aug 28, 2020 | Suhan S |

ಯಾದಗಿರಿ: ರೈತರ ಮನೆ ಬಾಗಿಲಿಗೆ ಹೋಗಿ ಜಾನುವಾರುಗಳಿಗೆ ಪಶು ವೈದ್ಯಕೀಯ ಸೇವೆ ನೀಡಲು 2019-20ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ರಾಜ್ಯಾದ್ಯಂತ 2 ಕೋಟಿ ರೂ. ವೆಚ್ಚದಲ್ಲಿ ಒಟ್ಟಾರೆ 15 “ಸುಸಜ್ಜಿತ ಪಶು ಚಿಕಿತ್ಸಾ ವಾಹನ’ ನೀಡಲು ಮಂಜೂರಾತಿ ನೀಡಲಾಗಿದೆ ಎಂದು ಪಶುಸಂಗೋಪನೆ,  ಹಜ್‌ ಮತ್ತು ವಕ್ಫ್  ಹಾಗೂ ಯಾದಗಿರಿ-ಬೀದರ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಹೇಳಿದರು.

Advertisement

ಜಿಲ್ಲೆಯ ಶಹಾಪುರದ ಖಾಸಗಿ ಹೋಟೆಲ್‌ ಆವರಣದಲ್ಲಿ ಪಶು ಸಂಜೀವಿನಿ ಸುಸಜ್ಜಿತ ಪಶು ಆಂಬ್ಯುಲೆನ್ಸ್‌ಗೆ ಚಾಲನೆ ನೀಡಿ ಅವರು ಮಾತನಾಡಿದರು. ಸದ್ಯ ಕಲ್ಯಾಣ ಕರ್ನಾಟಕ ಯಾದಗಿರಿ, ಕಲಬುರಗಿ, ಬೀದರ ಹಾಗೂ ರಾಯಚೂರು ಜಿಲ್ಲೆ ಒಳಗೊಂಡಂತೆ 15 ಜಿಲ್ಲೆಗಳಿಗೆ ಮೊದಲ ಹಂತದಲ್ಲಿ 15 ವಾಹನಗಳನ್ನು ನೀಡಲಾಗಿದೆ. ಮುಂದಿನ ದಿನದಲ್ಲಿ ಇತರೆ ಜಿಲ್ಲೆಗಳಿಗೂ ಆಂಬ್ಯುಲೆನ್ಸ್‌ ಒದಗಿಸಲಾಗುವುದು ಎಂದರು.

ಸುಸಜ್ಜಿತ ಸಂಚಾರಿ ಪಶು ಶಸ್ತ್ರಚಿಕಿತ್ಸಾ ವಾಹನದಿಂದ ದನ, ಎಮ್ಮೆ, ಕುರಿ, ಮೇಕೆ, ಹಂದಿ, ಇನ್ನಿತರ ಜಾನುವಾರುಗಳಿಗೆ ತಜ್ಞ ಪಶು ವೈದ್ಯರ ಮೂಲಕ ತುರ್ತು ಸೇವೆ ನೀಡಲು ಸಹಕಾರಿಯಾಗಿದೆ ಎಂದ ಸಚಿವರು ಗೋ ಹತ್ಯೆ ನಿಷೇಧ ಕಾಯ್ದೆಯನ್ನು ರಾಜ್ಯದಲಿಯೂ ಜಾರಿಗೆ ತರಲು ಮುಖ್ಯಮಂತ್ರಿಗಳ ಜತೆ ಚರ್ಚಿಸುವುದಾಗಿ ಹೇಳಿದರು.

ಸಂಸದ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ ಕಟೀಲ್‌, ರಾಯಚೂರು ಸಂಸದ ರಾಜಾ ಅಮರೇಶ್ವರ ನಾಯಕ, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ಅಧ್ಯಕ್ಷ ಬಾಬುರಾವ್‌ ಚಿಂಚನಸೂರ, ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ನರಸಿಂಹ ನಾಯಕ, ಶಾಸಕ ಸುಭಾಷ ಗುತ್ತೇದಾರ, ಮಾಜಿ ಶಾಸಕ ಗುರು ಪಾಟೀಲ ಶಿರವಾಳ, ಮಾಲೀಕಯ್ಯ ಗುತ್ತೇದಾರ, ಜಿಪಂ ಸದಸ್ಯ ಕಿಶನ್‌ ರಾಠೊಡ, ಬಿಜೆಪಿಜಿಲ್ಲಾಧ್ಯಕ್ಷ ಶರಣಭೂಪಾಲ್‌ ರೆಡ್ಡಿ, ಜಿಲ್ಲಾಧಿಕಾರಿ ಡಾ| ರಾಗಪ್ರೀಯಾ ಆರ್‌., ಸಹಾಯಕ ಆಯುಕ್ತ ಶಂಕರಗೌಡ ಎಸ್‌. ಸೋಮನಾಳ, ಪಶುಸಂಗೋಪನೆ ಇಲಾಖೆ ಉಪನಿರ್ದೇಶಕರು ಇತರರು ಇದ್ದರು. ಆಂಬ್ಯುಲೆನ್ಸ್‌ನಲ್ಲೇನಿದೆ..?: ಪಶು ಚಿಕಿತ್ಸಾ ಆಂಬ್ಯುಲೆನ್ಸ್‌ ವಾಹನವು ಆಧುನಿಕ ಪಶು ವೈದ್ಯಕೀಯ ಶಸ್ತ್ರ ಚಿಕಿತ್ಸಾ ಘಟಕ, ಪ್ರಯೋಗ ಶಾಲೆ, ಸ್ಕಾ Âನಿಂಗ್‌ ಉಪಕರಣಆಳವಡಿಕೆಗಾಗಿ ಅವಕಾಶ, 250 ಲೀಟರ್‌ ನೀರಿನ ಟ್ಯಾಂಕ್‌, 200 ಕೆಜಿ. ತೂಕದ ಶಸ್ತ್ರ ಚಿಕಿತ್ಸಾ ಟೇಬಲ್‌, ಎಲ್‌ಇಡಿ ಲೈಟ್‌, ಆಮ್ಲ ಜನಕ ಸಪೋರ್ಟ್‌ ಸಿಸ್ಟಮ್‌ ಅಳವಡಿಕೆ, ಆಕಸ್ಮಿಕ ಬೆಂಕಿ ಅನಾಹುತ ನಿವಾರಣೆ, ಜಾನುವಾರುಗಳ ಚಿಕಿತ್ಸೆಗೆ ಅಗತ್ಯವಾದ ಶಸ್ತ್ರ ಚಿಕಿತ್ಸಾ ಉಪಕರಣ ಕಿಟ್‌, ಮರಣೋತ್ತರಪರೀಕ್ಷೆ ಉಪಕರಣಗಳ ಕಿಟ್‌, ಪ್ರಸೂತಿ ಕಿಟ್‌ಗಳ ಪೆಟ್ಟಿಗೆ ಹೊಂದಿದೆ

Advertisement

Udayavani is now on Telegram. Click here to join our channel and stay updated with the latest news.

Next