Advertisement

ದತ್ತ ಪೀಠದಲ್ಲಿ ತ್ರಿವರ್ಣ ಧ್ವಜಾರೋಹಣ

09:44 AM Aug 17, 2019 | Team Udayavani |

ಚಿಕ್ಕಮಗಳೂರು: ವಿವಾದಿತ ದತ್ತಪೀಠ ಪರಿಸರದಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ಕಾರ್ಯಕರ್ತರು ಇಂದು ರಾಷ್ಟ್ರಧ್ವಜವನ್ನು ಹಾರಿಸುವ ಮೂಲಕ ವಿವಾದಿತ ಪ್ರದೇಶದಲ್ಲಿ ಸ್ವಾತಂತ್ರ್ಯದಿನದ ಸಂಭ್ರಮವನ್ನು ಆಚರಿಸಿಕೊಂಡಿದ್ದಾರೆ.

Advertisement

ಹುಣ್ಣಿಮೆ ಪೂಜೆ ಅಂಗವಾಗಿ ದತ್ತಪೀಠಕ್ಕೆ ಆಗಮಿಸಿದ್ದ ಹಿಂದೂ ಪರ ಸಂಘಟನೆಗಳ ಈ ಕಾರ್ಯಕರ್ತರು ದತ್ತ ಪೀಠ ಗುಹೆಯ ಪ್ರವೇಶ ದ್ವಾರದಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿ ದೇಶಭಕ್ತಿಯ ಘೋಷಣೆಗಳನ್ನು ಕೂಗಿದರು.

ಹಿಂದೂ ಪರ ಸಂಘಟನೆಗಳ ಮುಖಂಡರಾದ ರಘು ಸಕಲೇಶಪುರ, ತುಡಕೂರು ಮಂಜು ಹಾಗೂ ಇತರರು ಧ್ವಜಾರೋಹಣ ಕಾರ್ಯಕರ್ಮದಲ್ಲಿ ಭಾಗಿಯಾಗಿದ್ದರು.


ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ರಾಷ್ಟ್ರಧ್ವಜಾರೋಹಣಕ್ಕೆ ಜಿಲ್ಲಾಡಳಿತದ ಅನುಮತಿಯನ್ನು ಕೇಳಿದ್ದರು, ಆದರೆ ಜಿಲ್ಲಾಡಳಿತ ಅನುಮತಿ ನಿರಾಕರಿಸಿತ್ತು. ವಿವಾದಿತ ಪ್ರದೇಶವಾಗಿರುವ ದತ್ತ ಪೀಠ, ಬಾಬಾಬುಡನ್ ಗಿರಿ ದರ್ಗಾದ ಪರಿಸರದಲ್ಲಿ ಕಾರ್ಯಕರ್ತರು ರಾಷ್ಟ್ರಧ್ವಜನ್ನು ಹಾರಿಸಿಲ್ಲ. ಬದಲಾಗಿ ಅವರು ರಾಷ್ಟ್ರಧ್ವಜವನ್ನು ಕೈಯಲ್ಲಿ ಹಿಡಿದುಕೊಂಡು ಹೋಗಿ ಅಲ್ಲಿಗೆ ತೆರಳಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ರಾಷ್ಟ್ರಧ್ವಜವನ್ನು ಹಾರಿಸಲು ಎಲ್ಲರಿಗೂ ಹಕ್ಕಿದೆ ಎಂದು ಘಟನೆಯ ಕುರಿತಾಗಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next