Advertisement

Ayodhya ಟ್ರಸ್ಟ್ ಹೆಸರಿನಲ್ಲಿ ಹಣ ಸಂಗ್ರಹ: ವಿಎಚ್‌ಪಿಯಿಂದ ದೂರು ದಾಖಲು

07:01 PM Dec 31, 2023 | Team Udayavani |

ಹೊಸದಿಲ್ಲಿ: ಅಯೋಧ್ಯೆ ರಾಮ ಮಂದಿರ ಟ್ರಸ್ಟ್‌ನ ಹೆಸರಿನಲ್ಲಿ ಕೆಲವರು ಯಾವುದೇ ಅನುಮೋದನೆ ಪಡೆಯದೆ ಹಣ ವಸೂಲಿ ಮಾಡುತ್ತಿದ್ದಾರೆ ಮತ್ತು ಅವರ ವಿರುದ್ಧ ತತ್ ಕ್ಷಣ ಕ್ರಮ ಕೈಗೊಳ್ಳುವಂತೆ ಉತ್ತರ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಕೇಂದ್ರ ಗೃಹ ಸಚಿವಾಲಯಕ್ಕೆ ದೂರು ನೀಡಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಭಾನುವಾರ ಹೇಳಿದೆ.

Advertisement

ಎಕ್ಸ್ ನಲ್ಲಿ ವಿಎಚ್‌ಪಿ ರಾಷ್ಟ್ರೀಯ ವಕ್ತಾರ ವಿನೋದ್ ಬನ್ಸಾಲ್ ಅವರು ಪೋಸ್ಟ್‌ ಮಾಡಿದ್ದು, ದೇವಸ್ಥಾನದ ಟ್ರಸ್ಟ್ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಹೆಸರಿನಲ್ಲಿ ಜನರನ್ನು ಮೋಸ ಮಾಡಲು ಪ್ರಯತ್ನಿಸುತ್ತಿದ್ದು, ಮೋಸ ಹೋಗದಂತೆ ಜನರನ್ನು ಎಚ್ಚರಿಸಿದ್ದಾರೆ.

ಉತ್ತರ ಪ್ರದೇಶ ಪೊಲೀಸ್ ಮುಖ್ಯಸ್ಥರಿಗೆ ಕಳುಹಿಸಿದ ದೂರನ್ನು ಹಂಚಿಕೊಂಡಿದ್ದು, ಅದರ ಪ್ರತಿಯನ್ನು ಸಿಎಂ ಯೋಗಿ ಆದಿತ್ಯನಾಥ್ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಟ್ಯಾಗ್ ಮಾಡಲಾಗಿದೆ.

“ಎಚ್ಚರ! ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ನಕಲಿ ಗುರುತಿನ ಚೀಟಿ ಹೊಂದಿರುವ ಕೆಲವರು ಜನರನ್ನು ವಂಚಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಪೋಸ್ಟ್‌ನಲ್ಲಿ ಬರೆದಿದ್ದಾರೆ.

Advertisement

ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ದೇಗುಲದಲ್ಲಿ ಪ್ರಾಣಪ್ರತಿಷ್ಠಾಪನಾ ಸಮಾರಂಭಕ್ಕೆ ನಿಧಿ ಸಂಗ್ರಹಿಸಲು ಪ್ರತ್ಯೇಕ ಸಮಿತಿ ರಚಿಸಲು ಮತ್ತು ರಸೀದಿಗಳನ್ನು ಮುದ್ರಿಸಲು ಯಾರಿಗೂ ಅನುಮತಿ ನೀಡಲಾಗಿಲ್ಲ ಎಂದು ವಿಎಚ್‌ಪಿ ಪ್ರಧಾನ ಕಾರ್ಯದರ್ಶಿ ಮಿಲಿಂದ್ ಪರಾಂಡೆ ಹೇಳಿದ್ದಾರೆ.

ವಂಚಕರು ಜನರ ಭಾವನೆಗಳನ್ನು ದುರ್ಬಳಕೆ ಮಾಡಿಕೊಂಡು ಆನ್ಲೈನ್ ಮೂಲಕವೂ ಸಂಪರ್ಕಿಸಿ ಹಣ ಪಡೆಯುತ್ತಿರುವುದು ಬೆಳಕಿಗೆ ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next