Advertisement

ವಿಹೆಚ್‌ಪಿ ಪ್ರತಿಭಟನೆ: ಮಂಗಳೂರು ಪೊಲೀಸ್‌ ಆಯುಕ್ತರ ಸ್ಪಷ್ಟನೆ

03:23 PM Jun 15, 2022 | Team Udayavani |

ಮಂಗಳೂರು: ಪ್ರವಾದಿಯವರ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಿದವರ ವಿರುದ್ಧ ಪ್ರತಿಭಟನೆ ಹೆಸರಿನಲ್ಲಿ ದೇಶದಾದ್ಯಂತ ಹಿಂಸೆ ನಡೆಸಿರುವುದನ್ನು ಖಂಡಿಸಿ ಜೂ.16  ರಂದು ಸಂಜೆ 3.00 ಗಂಟೆಗೆ ಪಿವಿಎಸ್ ವೃತ್ತದ ಬಳಿ ವಿಶ್ವಹಿಂದೂಪರಿಷತ್ – ಭಜರಂಗದಳ ಮಂಗಳೂರು ಇವರ ವತಿಯಿಂದ ಪ್ರತಿಭಟನಾ ಸಭೆ ನಡೆಸುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ವಾಟ್ಸಾಪ್ ಗ್ರೂಪ್‌ಗಳಲ್ಲಿ ಸುದ್ದಿಯೊಂದು ಹರಿದಾಡುತ್ತಿದ್ದು, ಈ ಬಗ್ಗೆ ಮಂಗಳೂರು ನಗರ ಪೊಲೀಸ್‌ ಆಯುಕ್ತ ಎನ್‌ ಶಶಿಕುಮಾರ್ ಸ್ಪಷ್ಟನೆ ನೀಡಿದ್ದಾರೆ.

Advertisement

ಸಾಮಾಜಿಕ ಜಾಲತಾಣಗಳಲ್ಲಿ ಪಿವಿಎಸ್‌ ವೃತ್ತದ ಬಳಿ ವಿಶ್ವಹಿಂದೂಪರಿಷತ್ – ಭಜರಂಗದಳ ಮಂಗಳೂರು ಇವರ ವತಿಯಿಂದ ಪ್ರತಿಭಟನಾ ಸಭೆ ನಡೆಯಲಿದೆ ಎಂದು ಸುದ್ದಿಗಳು ಹರಿದಾಡುತ್ತಿದೆ. ಆದರೆ ಈ ಕುರಿತು ಅಧಿಕೃತವಾಗಿ ಅನುಮತಿ ಕೋರಿಕೆ ಪತ್ರವನ್ನು ಸಲ್ಲಿಸಿರುವುದು ಕಂಡು ಬರುವುದಿಲ್ಲ. ಆದಾಗ್ಯೂ ಸಹ ಹಾಲಿ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಭದ್ರತೆಯ ಹಿತದೃಷ್ಟಿಯಿಂದ ಯಾವುದೇ ಪ್ರತಿಭಟನೆಯನ್ನು ಮಾಡಲು ಅನುಮತಿ ನೀಡಿರುವುದಿಲ್ಲವಾಗಿ ಮಾಹಿತಿಯನ್ನು ತಿಳಿಯಪಡಿಸಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ:ಪುತ್ತೂರು: ಕೋಳಿ ಫಾರ್ಮ್ ರೈಟರ್‌ನಿಂದ ಮಹಿಳೆಯ ಅತ್ಯಾಚಾರ; ವಿಡಿಯೋ ಚಿತ್ರೀಕರಿಸಿ ಬೆದರಿಕೆ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next