Advertisement
ಬಳಿಕ ಅಮೃತವರ್ಷಿಣಿ ಸಭಾಭವನದಲ್ಲಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಉಪರಾಷ್ಟ್ರಪತಿಗಳ ಪತ್ನಿ ಡಾ| ಸುದೇಶ್ ಧನ್‌ಕರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಹೇಮಾವತಿ ವೀ.ಹೆಗ್ಗಡೆ, ಸಂಸದ ಕ್ಯಾ| ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ ಮುಖ್ಯ ಅತಿಥಿಗಳಾಗಿರುವರು.
ಶ್ರೀ ಸಾನ್ನಿಧ್ಯ ಉದ್ಘಾಟನೆ ಪೂರ್ವಭಾವಿಯಾಗಿ ಜ.6ರಂದು ಸಂಜೆಯಿಂದ ಡಾ| ಹೆಗ್ಗಡೆ ಹಾಗೂ ಕುಟುಂಬಸ್ಥರು ಸಹಿತ ಪ್ರಮುಖರ ಉಪಸ್ಥಿತಿಯಲ್ಲಿ ವಿಶೇಷ ಧಾರ್ಮಿಕ ಪೂಜಾ ವಿಧಿವಿಧಾನಗಳು ನೆರವೇರಿದವು. ವಿಶೇಷ ವಾಯುಪಡೆ ವಿಮಾನದಲ್ಲಿ ಆಗಮನ
ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಅವರು ದಿಲ್ಲಿಯಿಂದ ವಾಯುಪಡೆಯ ವಿಶೇಷ ವಿಮಾನದಲ್ಲಿ ನೇರವಾಗಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಅಲ್ಲಿಂದ ವಾಯುವಪಡೆಯ ವಿಶೇಷ ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳ ಹೆಲಿಪ್ಯಾಡ್‌ನಲ್ಲಿ ಬಂದಿಳಿಯುವರು. ಉಪರಾಷ್ಟ್ರಪತಿ ಆಗಮನದ ಹಿನ್ನೆಲೆಯಲ್ಲಿ ವಿಶೇಷ ಭದ್ರತಾ ತಂಡ ಸೋಮವಾರವೇ ಸ್ಥಳದಲ್ಲಿದ್ದು, ಭದ್ರತೆಯ ಉಸ್ತುವಾರಿ ವಹಿಸಿಕೊಂಡಿದೆ.