ಬೆಳಗಾವಿ: ಪಾರಂಪರಿಕ ಔಷಧೀಯ ಸಂಶೋಧನಾ ಕ್ಷೇತ್ರದಲ್ಲಿ ಇಡೀ ಜಗತ್ತು ಭಾರತದ ಕಡೆ ನೋಡುತ್ತಿದೆ. ಈ ಹಿನ್ನಲೆಯಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ದೇಶವನ್ನು ಮುಂಚೂಣಿಗೆ ಕರೆದೊಯ್ಯುವ ಹೊಣೆಗಾರಿಕೆ ವಿಜ್ಞಾನಿಗಳು ಮತ್ತು ಸಂಶೋಧಕರ ಮೇಲಿದೆ ಎಂದು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಹೇಳಿದ್ದಾರೆ.
ಸೋಮವಾರ ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್ತಿನ ರಾಷ್ಟ್ರೀಯ ಪಾರಂಪರಿಕ ಚಿಕಿತ್ಸಾ ವಿಧಾನ ಸಂಸ್ಥೆಯ ೧೮ ನೇ ಸಂಸ್ಥಾಪನಾ ದಿನಾಚರಣೆ ಸಮಾರಂಭದಲ್ಲಿ ಭಾಗಿಯಾಗಿ ಮಾತನಾಡಿದ ಅವರು ಜೀವವೈವಿಧ್ಯವನ್ನು ಕಾಪಾಡುವ ಮೂಲಕ ಪಾರಂಪರಿಕ ಔಷಧೀಯ ಪದ್ಧತಿಯನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸಬೇಕು. ನಮ್ಮ ಶ್ರೀಮಂತ ಸಾಂಪ್ರದಾಯಿಕ ಔಷಧ ವ್ಯವಸ್ಥೆಗಳು ವಿಜ್ಞಾನ, ತತ್ವಶಾಸ್ತ್ರ ಮತ್ತು ಆಧ್ಯಾತ್ಮಿಕತೆಯ ಪರಿಪೂರ್ಣ ಮಿಶ್ರಣವನ್ನು ಒಳಗೊಂಡಿವೆ. ಇದಕ್ಕೆ ಪೂರಕವಾಗಿ ಪಂಚಾಯತ್ ಮಟ್ಟದಲ್ಲಿ ಔಷಧೀಯ ಮತ್ತು ಗಿಡಮೂಲಿಕೆ ಸಸ್ಯಗಳನ್ನು ಉತ್ತೇಜಿಸಲು ಗ್ರಾಮ ಪಂಚಾಯತ್‌ಗಳು ಮುಂದಾಗಬೇಕು ಎಂದು ಹೇಳಿದರು.
ಆಯುರ್ವೇದ, ಯುನಾನಿ, ಸಿದ್ಧ, ಹೋಮಿಯೋಪಥಿ, ಯೋಗ ಒಳಗೊಂಡ ಆಯುಷ್ ಪದ್ಧತಿ ಭಾರತದ ಹೆಗ್ಗಳಿಕೆಯಾಗಿದೆ. ಸಾಂಕ್ರಾಮಿಕ ರೋಗಗಳ ನಿಯಂತ್ರಣದಲ್ಲಿ ಪಾರಂಪರಿಕ ಔಷಧ ಚಿಕಿತ್ಸಾ ವಿಧಾನದ ಪಾತ್ರ ಪ್ರಮುಖವಾಗಿದೆ
ಆಯುರ್ವೇದ, ಸಿದ್ಧ, ಯುನಾನಿ ಮತ್ತು ಯೋಗವನ್ನು ಒಳಗೊಂಡಿರುವ ಭಾರತದ ಶ್ರೀಮಂತ ಸಾಂಪ್ರದಾಯಿಕ ವೈದ್ಯಶಾಸ್ತ್ರವು ನಮ್ಮ ಪೂರ್ವಜರ ಆಳವಾದ ಬುದ್ಧಿವಂತಿಕೆಗೆ ಸಾಕ್ಷಿಯಾಗಿದೆ ಎಂದು ಹೇಳಿದರು.
ಇದನ್ನೂ ಓದಿ: Pendrive Case: ಮೇ 31ಕ್ಕೆ ‘SIT’ ಮುಂದೆ ವಿಚಾರಣೆಗೆ ಹಾಜರಾಗ್ತೀನಿ… ಪ್ರಜ್ವಲ್ ರೇವಣ್ಣ