Advertisement

ಇಂದು ರಾಜ್ಯಕ್ಕೆ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಭೇಟಿ

11:24 PM May 26, 2024 | Team Udayavani |

ಬೆಂಗಳೂರು: ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರು ಒಂದು ದಿನದ ಪ್ರವಾಸಕ್ಕಾಗಿ ರಾಜ್ಯಕ್ಕೆ ಆಗಮಿಸು
ತ್ತಿದ್ದು, ಬೆಳಗಾವಿ ಹಾಗೂ ಬೆಂಗಳೂರಿನಲ್ಲಿ ನಡೆಯಲಿರುವ ಕಾರ್ಯಕ್ರಮಗಳಲ್ಲಿ ಭಾಗಿ ಯಾಗಲಿದ್ದಾರೆ.

Advertisement

ಬೆಳಗಾವಿಯ ಇಂಡಿಯನ್‌ ಕೌನ್ಸಿಲ್‌ ಆಫ್ ಮೆಡಿಕಲ್‌ ರಿಸರ್ಚ್‌ -ನ್ಯಾಷನಲ್‌ ಇನ್‌ಸ್ಟಿಟ್ಯೂಟ್‌ ಆಫ್ ಟ್ರೆಡಿಷನಲ್‌ ಮೆಡಿಸಿನ್‌ (ಐಸಿಎಂಆ – ಎನ್‌ಐಟಿಎಂ) ಸಂಸ್ಥೆಯು ಸೋಮವಾರ 18ನೇ ಸಂಸ್ಥಾಪನಾ ದಿನವನ್ನು ಆಚರಿಸುತ್ತಿದ್ದು, ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಉದ್ಘಾಟಿಸಲಿದ್ದಾರೆ. ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋತ್‌, ಭಾರತ ಸರಕಾರದ ಕಾರ್ಯದರ್ಶಿ ಡಾ| ರಾಜೀವ್‌ ಬಹ್ಲ, ಕೇಂದ್ರ ಆರೋಗ್ಯ ಸಂಶೋಧನ ಇಲಾಖೆಯ ಜಂಟಿ ಕಾರ್ಯದರ್ಶಿ ಅನು ನಗರ್‌ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಸೋಮವಾರ ಬೆಳಗಾವಿಯ ಐಸಿಎಂಆರ್‌-ನ್ಯಾಷನಲ್‌ ಇನ್‌ಸ್ಟಿಟ್ಯೂಟ್‌ ಆಫ್ ಟ್ರೆಡಿಷನಲ್‌ ಮೆಡಿಸಿನ್‌ (ಎನ್‌ಐಟಿಎಂ) ಸಂಸ್ಥಾಪನಾ ದಿನಾಚರಣೆ, ಬೆಳಗಾವಿಯ ಕೆಎಲ್ ಇ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.ಬಳಿಕ ಬೆಂಗಳೂರಿನಲ್ಲಿ ಸಿಎಸ್‌ಐಆರ್‌-ನ್ಯಾಶನಲ್‌ ಏರೋ ನಾಟಿಕ್ಸ್‌ ಲಿಮಿಟೆಡ್‌ಗೆ ಭೇಟಿ ನೀಡಲಿದ್ದಾರೆ. ಜಗದೀಪ್‌ ಧನಕರ್‌ ಸಿಎಸ್‌ಐಆರ್‌-ಎನ್‌ಎಎಲ್‌ಬೇಲೂರು ಕ್ಯಾಂಪಸ್‌ಗೆ ಭೇಟಿ ನೀಡಲಿದ್ದಾರೆ. ಅಲ್ಲಿ ಕೆಲವು ಯೋಜನೆಗಳಿಗೆ ಅಡಿಗಲ್ಲು ಹಾಕಲಿದ್ದಾರೆ. ಎಲ್‌ಸಿಎ ಘಟಕಗಳು ಮತ್ತು ಸಾರ್ಸ್‌ನ ಪ್ರದರ್ಶನ ವೀಕ್ಷಿಸಲಿದ್ದಾರೆ. ಪ್ರವಾಸದ ವೇಳೆ ಬೆಂಗಳೂರಿನ ರಾಜಭವನಕ್ಕೂ ಭೇಟಿ ನೀಡಲಿ¨ªಾರೆ.

Advertisement

Udayavani is now on Telegram. Click here to join our channel and stay updated with the latest news.

Next