Advertisement

ಪಕ್ಷಗಳ ನಡುವೆ ಸ್ನೇಹ ಸೇತುವೆ ನಿರ್ಮಿಸುವೆ: ಮಾರ್ಗರೇಟ್‌ ಆಳ್ವಾ

10:29 PM Aug 01, 2022 | Team Udayavani |

ನವದೆಹಲಿ: “ನಾನು ಉಪರಾಷ್ಟ್ರಪತಿಯಾಗಿ ಅಧಿಕಾರಕ್ಕೆ ಬಂದರೆ ಪಕ್ಷಗಳ ನಡುವೆ ಏರ್ಪಟ್ಟಿರುವ ಕಂದಕವನ್ನು ದೂರಾಗಿಸಿ, ಪಕ್ಷಗಳ ನಡುವೆ ಸ್ನೇಹ ಸೇತುವೆಯನ್ನು ನಿರ್ಮಿಸಲು ಪ್ರಯತ್ನಿಸುತ್ತೇನೆ….’ ಹೀಗೆಂದು ಉಪರಾಷ್ಟ್ರಪತಿ ಚುನಾವಣೆಗೆ ವಿಪಕ್ಷಗಳ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾರ್ಗರೇಟ್‌ ಆಳ್ವಾ, ಎಲ್ಲಾ ಪಕ್ಷಗಳ ಸಂಸದರಿಗೆ ಬರೆದಿರುವ “ಮತಯಾಚನಾ ಪತ್ರ’ದಲ್ಲಿ ತಿಳಿಸಿದ್ದಾರೆ.

Advertisement

“ಉಪರಾಷ್ಟ್ರಪತಿ ಚುನಾವಣೆಯನ್ನು, ಪ್ರಜಾಪ್ರಭುತ್ವದ ಆಧಾರದಲ್ಲಿ ದೇಶದ ಸಂಸತ್ತು ಸುಲಲಿತವಾಗಿ ಕಾರ್ಯನಿರ್ವಹಣೆ ಮಾಡುವ ನಿಟ್ಟಿನಲ್ಲಿ ನೋಡಬೇಕು. ನಾನು ಉಪರಾಷ್ಟ್ರಪತಿಯಾಗಿ ಆಯ್ಕೆಯಾದರೆ ಈ ಆಶಯಗಳ ಅನುಷ್ಠಾನಕ್ಕಾಗಿ ಅವಿರತ ಶ್ರಮಿಸುತ್ತೇನೆ. ಈ ದೇಶದ ಸಂವಿಧಾನ ರಕ್ಷಣೆ ಹಾಗೂ ಸಂಸದೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ’ ಎಂದು ಅವರು ತಿಳಿಸಿದ್ದಾರೆ.

ಮತ್ತೊಂದೆಡೆ, ರಾಜ್ಯಸಭೆಯ ಸಭಾಧ್ಯಕ್ಷೆಯಾಗಿ ಪಕ್ಷಗಳ ನಡುವಿನ ಭಿನ್ನಾಭಿಪ್ರಾಯಗಳನ್ನು ತೊಡೆದು ಹಾಕಿ, ಒಮ್ಮತದ ಸಲಹೆಗಳು ಹಾಗೂ ಅಭಿಪ್ರಾಯಗಳು ಮೂಡಿಬರುವಂಥ ವ್ಯವಸ್ಥೆಯೊಂದನ್ನು ನಿರ್ಮಿಸುವ ಪ್ರಯತ್ನ ಮಾಡುವುದಾಗಿ ಅವರು ತಿಳಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next