Advertisement

ನೆರೆ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ

09:04 AM Sep 24, 2019 | Suhan S |

ಧಾರವಾಡ: ಸರ್ಕಾರ ಉಳಿಸಿಕೊಳ್ಳುವುದರಲ್ಲಿಯೇ ಕಾಲಹರಣ ಮಾಡುತ್ತಿರುವ ಸರ್ಕಾರ ಜಿಲ್ಲೆಯ ನೆರೆ ಸಂತ್ರಸ್ತರ ನೋವಿಗೆ ಸ್ಪಂದಿಸುತ್ತಿಲ್ಲ ಎಂದು ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ಮಾಡಲಾಯಿತು.

Advertisement

ನೆರೆ ಹಾವಳಿಯಿಂದ ತಾಲೂಕಿನ ಗ್ರಾಮೀಣ ಭಾಗದ ರಸ್ತೆಗಳು ಸಂಪೂರ್ಣ ಹಾಳಾಗಿವೆ. ಈ ಕುರಿತು ತಹಶೀಲ್ದಾರ್‌ ಗಮನಕ್ಕೆ ತರಲಾಗಿದ್ದು, ಈವರೆಗೆ ಯಾವುದೇ ದುರಸ್ತಿ ಕಾರ್ಯ ನಡೆದಿಲ್ಲ. ಕಟಾವು ಮಾಡಿದ ಕಬ್ಬು ಕಾರ್ಖಾನೆಗೆ ಕಳುಹಿಸಲು ರೈತರು ಪರದಾಡುವಂತಾಗಿದೆ. ಅರ್ಹ ನೆರೆ ಸಂತ್ರಸ್ತರಿಗೆ ಪರಿಹಾರ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯಉಪಾಧ್ಯಕ್ಷ ಉಳವಪ್ಪ ಒಡೆಯರ್‌, ಗಂಗಾಧರ ಪಾಟೀಲ ಕುಲಕರ್ಣಿ, ಮಂಜುನಾಥ ಚಂದನಮಟ್ಟಿ, ಕರೆಪ್ಪ ಗಂಡಗುದರಿ, ಸಹದೇವ ಗುಳೇದಕೊಪ್ಪ, ನೀಲಪ್ಪ ಹುಲಮನಿ, ರುದ್ರಪ್ಪ ಹುಲಿಕೇರಿ, ಮೌಲಾಸಾಬ್‌ ಮುಲ್ಲಾ ಇನ್ನಿತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next