Advertisement

ಹಿಂದೂ ಪರ ಸಂಘಟನೆಗಳಿಂದ ಮಡಿಕೇರಿಯಲ್ಲಿ ವಿಜಯೋತ್ಸವ 

01:00 AM Feb 28, 2019 | Team Udayavani |

ಮಡಿಕೇರಿ:ಪಾಕಿಸ್ತಾನದ ಉಗ್ರಗಾಮಿ ನೆಲೆಗಳ ಮೇಲೆ ಭಾರತೀಯ ವಾಯುಸೇನೆಯ ನಡೆಸಿದ ಎರಡನೇ ಸರ್ಜಿಕಲ್‌ ಸ್ಟ್ರೆçಕ್‌ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್‌, ಬಜರಂಗದಳ ಸೇರಿದಂತೆ ಸಂಘ‌ ಪರಿವಾರದ ಕಾರ್ಯಕರ್ತರು ನಗರದ ಜನರಲ್‌ ತಿಮ್ಮಯ್ಯ ವೃತ್ತದಲ್ಲಿ ವಿಜಯೋತ್ಸವ ಆಚರಿಸಿದರು.

Advertisement

ವಿಶ್ವ ಹಿಂದೂ ಪರಿಷತ್‌ನ ದಕ್ಷಿಣ ಪ್ರಾಂತ ಸಂಘಟನಾ ಕಾರ್ಯದರ್ಶಿ ಕೇಶವ ಹೆಗಡೆ, ಕಳೆದ ಫೆ.14 ರಂದು ಕಾಶ್ಮೀರದ ಪುಲ್ವಾಮದಲ್ಲಿ ಪಾಕಿಸ್ತಾನಿ ಪ್ರೇರಿತ ಭಯೋತ್ಪಾದಕರಿಂದ ಭಾರತೀಯ ಸೈನಿಕರ ಮೇಲೆ ನಡೆದ ಅಮಾನವೀಯ ದಾಳಿಗೆ ಪ್ರತಿಯಾಗಿ ಮಂಗಳವಾರದಂದು ಭಾರತೀಯ ವಾಯುಸೇನೆ ನಡೆಸಿದ ಸರ್ಜಿಕಲ್‌ ಸ್ಟ್ರೆçಕ್‌ ಪಾಕಿಸ್ತಾನಕ್ಕೆ ಎಚ್ಚರಿಕೆಯ ಸಂದೇಶವಾಗಬೇಕು. ಕೊಡಗಿನ ಈ ಸೈನಿಕ ಭೂಮಿಯಲ್ಲಿ ನಾವೆಲ್ಲರು ಸೇರಿ ವಿಜಯೋತ್ಸವವನ್ನು ಆಚರಿಸುತ್ತಿರುವುದು ಜೀವನ ಸಾರ್ಥಕ ಎನಿಸುವಂತೆ ಮಾಡಿದೆಯೆಂದು ಹೇಳಿದರು. ಶ್ವ ಹಿಂದೂ ಪರಿಷತ್‌ನ ದಕ್ಷಿಣ ಪ್ರಾಂತ ಅಧ್ಯಕ್ಷ ಎಂ.ಬಿ. ಪುರಾಣಿಕಮಾತನಾಡಿ, ಪಾಕಿಸ್ತಾನದ ದುಷ್ಕೃತ್ಯಗಳಿಗೆ ಭಾರತ ಸರಿಯಾದ ಉತ್ತರ ನೀಡಿದೆ. ಭಾರತೀಯ ವಾಯುಸೇನೆಯ ಈ ಕ್ರಮದಿಂದ ಭಾರತೀಯ ಸೇನಾ ಪಡೆಗಳಲ್ಲಿ ಮತ್ತಷ್ಟು ಧೈರ್ಯ ಮತ್ತು ಸ್ಫೂರ್ತಿಯನ್ನು ತುಂಬುವ ಕೆಲಸವಾಗಿದೆ, ಪ್ರಧಾನಿ ಮೋದಿ ಅವರನ್ನು ನಾವೆಲ್ಲರು ಬೆಂಬಲಿಸಬೇಕೆಂದು ಹೇಳಿದರು    ವಿ… ವಿಶ್ವ ಹಿಂದೂ ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿ ಡಿ. ನರಸಿಂಹ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭ ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ಬಿ. ಭಾರತೀಶ್‌, ಪ್ರಧಾನ ಕಾರ್ಯದರ್ಶಿ ರಾಬಿನ್‌ ಸುಬ್ಬಯ್ಯ, ವಿಹಿಂಪ ಜಿಲ್ಲಾಧ್ಯಕ್ಷ ಟಾಟಾ ಬೋಪಯ್ಯ, ವಿಹಿಂಪ ಪ್ರಾಂತೀಯ ಕಾರ್ಯದರ್ಶಿ ಶರಣ್‌ ಪಂಪ್‌ವೆಲ್‌ ಸೇರಿದಂತೆ ನೂರಾರು ಮಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಜಯಘೋಷ ಹಾಕಿದರಲ್ಲದೆ, ಪಟಾಕಿ ಸಿಡಿಸಿ ಸಂಭ್ರಮಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next