Advertisement

Congress ಅಭ್ಯರ್ಥಿಗಳ ಗೆಲುವು ಖಚಿತ: ವಿನಯ್‌ ಕುಮಾರ್‌ ಸೊರಕೆ

12:02 AM Jun 02, 2024 | Team Udayavani |

ಕಾಪು: ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಕಾಂಗ್ರೆಸ್‌ ಗೌರವಿಸುತ್ತ ಸಂರಕ್ಷಿಸುತ್ತಾ ಬರುತ್ತಿದ್ದರೆ ಬಿಜೆಪಿ ಸಂವಿಧಾನವನ್ನು ಅವಮಾನಿ ಸುತ್ತಾ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹಾಳುಗೆಡಹಿ ರಾಜಪ್ರಭುತ್ವವನ್ನು ಹೇರುವ ದುರುದ್ದೇಶ ಹೊಂದಿದೆ. ಪ್ರಜ್ಞಾವಂತ ಮತದಾರರು ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸುವುದು ನಿಶ್ಚಿತ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್‌ ಕುಮಾರ್‌ ಸೊರಕೆ ಹೇಳಿದರು.

Advertisement

ಕಾಪುವಿನಲ್ಲಿ ನೈಋತ್ಯ ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರದ ಚುನಾವಣೆ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೆ. ಜಯಪ್ರಕಾಶ್‌ ಹೆಗ್ಡೆ ಮಾತನಾಡಿ, ದೇಶಾದ್ಯಂತ ಕೇಂದ್ರ ಸರಕಾರದ ವಿರುದ್ಧ ಜನ ರೊಚ್ಚಿಗೆದ್ದಿದ್ದಾರೆ. ಪರಿಷತ್‌ ಚುನಾವಣೆಯಲ್ಲೂ ಕಾಂಗ್ರೆಸ್‌ನ ಅಭ್ಯರ್ಥಿಗಳ ಗೆಲುವಿಗಾಗಿ ಶ್ರಮಿಸೋಣ ಎಂದರು.

ಕಾಪು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ನವೀನ್‌ಚಂದ್ರ ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಅಶೋಕ್‌ ಕುಮಾರ್‌ ಕೊಡವೂರು, ಕೆಪಿಸಿಸಿ ಸಂಯೋಜಕ ನವೀನ್‌ಚಂದ್ರ ಜೆ. ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಶಿರ್ವ ವರದಿ
ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ ಅವರು ಶಿರ್ವ ಡಾನ್‌ ಬೊಸ್ಕೊ ವಿದ್ಯಾಸಂಸ್ಥೆ, ಸಂತ ಮೇರಿ ಕಾಲೇಜು ಮತ್ತು ಎಂಎಸ್‌ಆರ್‌ಎಸ್‌ ಕಾಲೇಜಿಗೆ ಭೇಟಿ ನೀಡಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತ ಯಾಚಿಸಿದರು. ಕಾಪು ಕ್ಷೇತ್ರ ಪ್ರಚಾರ ಸಮಿತಿ ಅಧ್ಯಕ್ಷ ಜಿತೇಂದ್ರ ಫುರ್ಟಾಡೋ, ಶಿರ್ವ ಗ್ರಾ.ಪಂ. ಅಧ್ಯಕ್ಷೆ ಸವಿತಾ ರಾಜೇಶ್‌ ಮತ್ತಿತರರಿದ್ದರು.

Advertisement

ರಮಾನಾಥ ರೈ ಪ್ರಚಾರ
ಬಂಟ್ವಾಳ: ಕಾಂಗ್ರೆಸ್‌ ಅಭ್ಯರ್ಥಿಗಳಾದ ನೈಋತ್ಯ ಶಿಕ್ಷಕರ ಕ್ಷೇತ್ರದ ಡಾ| ಕೆ.ಕೆ. ಮಂಜುನಾಥ್‌ ಕುಮಾರ್‌ ಹಾಗೂ ಪದವೀಧರರ ಕ್ಷೇತ್ರದ ಆಯನೂರು ಮಂಜುನಾಥ್‌ ಅವರ ಪರವಾಗಿ ಮಾಜಿ ಸಚಿವ ಬಿ. ರಮಾನಾಥ ರೈ ಅವರು ಪೊಳಲಿ ಸರಕಾರಿ ಶಾಲೆ, ಮೊಡಂಕಾಪು ದೀಪಿಕಾ ಪ್ರೌಢಶಾಲೆ, ಕಾರ್ಮೆಲ್‌ ಕಾಲೇಜು, ವಿಸ್ಡಮ್‌ ಆಂಗ್ಲ ಮಾಧ್ಯಮ ಶಾಲೆ, ಮಾಣಿ ಕರ್ನಾಟಕ ಪ್ರೌಢಶಾಲೆ, ಗೂಡಿನಬಳಿ ಬಿ. ಮೂಡ ಕಾಲೇಜು, ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಗಳಿಗೆ ಭೇಟಿ ನೀಡಿ ಮತಯಾಚಿಸಿದರು.

ಚುನಾವಣಾ ಉಸ್ತುವಾರಿಗಳಾದ ಅಪ್ಪಿ, ಶಶಿಕಲಾ ಪದ್ಮನಾಭ, ಪಾಣೆಮಂಗಳೂರು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸುದೀಪ್‌ಕುಮಾರ್‌ ಶೆಟ್ಟಿ ಮತ್ತಿತರರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next