Advertisement

ಖರ್ಗೆ ಗೆಲುವು; ಕಲಬುರಗಿಯಲ್ಲಿ ಸುರಿವ ಮಳೆಯಲ್ಲೂ ವಿಜಯೋತ್ಸವ

09:07 PM Oct 19, 2022 | Team Udayavani |

ಕಲಬುರಗಿ: ರಾಜ್ಯ ಕಂಡ ಹಿರಿಯ ಮುತ್ಸದ್ದಿ ಹಾಗೂ ಕಲ್ಯಾಣ ಕರ್ನಾಟಕದ ಹಿರಿಯ ರಾಜಕಾರಣಿ ಡಾ. ಮಲ್ಲಿಕಾರ್ಜುನ್ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗುತ್ತಿದ್ದಂತೆ ತವರು ಜಿಲ್ಲೆ ಕಲ್ಬುರ್ಗಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಹಿರಿಯ ಮುಖಂಡರು ಸುರಿವ ಮಳೆಯನ್ನೂ ಲೆಕ್ಕಿಸದೆ ನಗರದ ಸರದಾರ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ವೃತ್ತದಲ್ಲಿ ವಿಜಯೋತ್ಸವ ಆಚರಿಸಿದರು.

Advertisement

ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ್ ನೇತೃತ್ವದಲ್ಲಿ ಜಮಾವಣೆಗೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಪರಸ್ಪರ ಸಿಹಿ ಹಂಚಿ ಖುಷಿಪಟ್ಟರು.

ಈ ವೇಳೆ ಮಾತನಾಡಿದ ಕಾಂಗ್ರೆಸ್ ಪಕ್ಷದ ಜಿಲ್ಲಾ ಅಧ್ಯಕ್ಷ ಜಗದೇವ ಗುತ್ತೇದಾರ, ಡಾ. ಮಲ್ಲಿಕಾರ್ಜುನ ಖರ್ಗೆ ಅವರ ಗೆಲುವು ಐತಿಹಾಸಿಕ ದಿಗ್ವಿಜಯ ಮತ್ತು ಇತಿಹಾಸದ ಪುಟಗಳಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡುವಂತಹ ದಿನವಾಗಿದೆ ಎಂದು ವ್ಯಾಖ್ಯಾನಿಸಿದರು.

ಈ ವೇಳೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜು ಜಾರ್ಖಂಡ್ ಚಂದ್ರಿಕಾ ಪರಮೇಶ್ವರಿ ಸೇರಿದಂತೆ ಹಲವಾರು ನಾಯಕರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next