Advertisement

ಜೈಲಿನಿಂದಲೇ ವಿಡಿಯೋ ಕಾಲ್ : ಸಾಮಾನ್ಯ ಸಭೆ ಚರ್ಚೆಯಲ್ಲಿ ಪುರಸಭೆ ಸದಸ್ಯ ಭಾಗಿ

10:33 PM Sep 22, 2022 | Team Udayavani |

ಸಂಕೇಶ್ವರ : ಹಣಕಾಸಿನ ವ್ಯವಹಾರದಲ್ಲಿ ಒಂಟಿ ಮಹಿಳೆಯನ್ನು ಗುಂಡಿಕ್ಕಿ ಕೊಲೆ ಮಾಡಿರುವ ಆರೋಪದಡಿ ಬಂಧಿತನಾಗಿ ಜೈಲಿನಲ್ಲಿರುವ ಆರೋಪಿಯೋರ್ವ ಜೈಲಿನಿಂದಲೇ ವಿಡಿಯೋ ಕಾಲ್ ಮಾಡುವ ಮೂಲಕ ತನ್ನ ವಾರ್ಡಿನ ಸಮಸ್ಯೆಗಳನ್ನು ಸಾಮಾನ್ಯ ಸಭೆಯಲ್ಲಿ ಚರ್ಚೆ ನಡೆಸಿರುವ ಘಟನೆ ಸಂಕೇಶ್ವರ ಪುರಸಭೆಯಲ್ಲಿ ಬುಧವಾರ ಸಂಜೆ ನಡೆದಿದೆ.

Advertisement

ಸದ್ಯ ಬೆಳಗಾವಿ ಹಿಂಡಲಗಾ ಕಾರ್ಯಗೃಹದಲ್ಲಿರುವ ಸಂಕೇಶ್ವರ ಪುರಸಭೆಯ 14ನೇ ವಾರ್ಡಿನ ಬಿಜೆಪಿ ಸದಸ್ಯ, ವಿಚಾರಣಾಧೀನ ಕೈದಿ ಉಮೇಶ ಕಾಂಬಳೆ ವಿಚಾರಣಾ ನ್ಯಾಯಾಲಯದ ಅನುಮತಿ ಪಡೆದು ಸಾಮಾನ್ಯ ಸಭೆಗೆ ವಿಡಿಯೋ ಕಾಲ್ ಮೂಲಕ ಹಾಜರಾಗಿದ್ದಾನೆ. ಸಭೆಯ ಚಿತ್ರೀಕರಣ ಮಾಡಿರುವ ಕೆಲವರು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ.

ಸಂಕೇಶ್ವರ ಪುರಸಭೆ ಸದಸ್ಯ ಉಮೇಶ ಕಾಂಬಳೆ ಈತ ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದಂತೆ 2022ರ ಜನೇವರಿ 16ರಂದು ಸಂಕೇಶ್ವರ ಪಟ್ಟಣದ ಮನೆಯಲ್ಲಿದ್ದ ಒಂಟಿ ಮಹಿಳೆಯನ್ನು ಕಂಟ್ರಿ ಪಿಸ್ತೂಲ್ ಬಳಸಿ ಗುಂಡಿಕ್ಕಿ ಕೊಲೆ ಮಾಡಿರುವ ಪ್ರಕರಣದಲ್ಲಿ ಜ. 20ರಂದು ಬಂಧನಕ್ಕೊಳಗಾಗಿದ್ದಾನೆ. ಸದ್ಯ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿರುವ ಉಮೇಶ ಕಾಂಬಳೆ ಜೈಲಿನಿಂದ ವಿಡಿಯೋ ಕಾಲ್ ಮೂಲಕ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಭಾಗಿಯಾಗಿದ್ದಾನೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next