Advertisement

Delhi ಬೆಂಕಿ ಅವಘಡ; ಕಟ್ಟಡದಿಂದ ಜಿಗಿದು ಪಾರಾದ ವಿದ್ಯಾರ್ಥಿಗಳು: Video

04:38 PM Jun 15, 2023 | Team Udayavani |

ಹೊಸದಿಲ್ಲಿ : ದೆಹಲಿಯ ಮುಖರ್ಜಿ ನಗರದಲ್ಲಿ ಗುರುವಾರ ಕಟ್ಟಡವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ ನಂತರ ಕೋಚಿಂಗ್ ಸೆಂಟರ್‌ನ ಒಳಗಿದ್ದ ವಿದ್ಯಾರ್ಥಿಗಳು ಕಟ್ಟಡದಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ.

Advertisement

ಮಧ್ಯಾಹ್ನ 12.30ಕ್ಕೆ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡದ ಮೇಲಿನ ಮಹಡಿಯಿಂದ ಹೊಗೆ ಹೊರಬರುತ್ತಿರುವುದನ್ನು ಮತ್ತು ವಿದ್ಯಾರ್ಥಿಗಳು ತಮ್ಮ ಬೆನ್ನಿನ ಮೇಲೆ ಬ್ಯಾಗ್‌ಗಳನ್ನು ಹಾಕಿಕೊಂಡು ತಂತಿಗಳನ್ನು ಬಳಸಿ ಕೆಳಗೆ ಹಾರುತ್ತಿರುವುದನ್ನು ದೃಶ್ಯಗಳು ತೋರಿಸಿವೆ. ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಕೆಳಗಿಳಿಯುವಾಗ ಇತರ ಮಹಡಿಗಳಲ್ಲಿ ಅಳವಡಿಸಲಾದ ಎಸಿಗಳನ್ನೂ ಸಹ ಬಳಸಿಕೊಂಡು ಪ್ರಾಣ ಉಳಿಸಿಕೊಂಡರು.

11 ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಕಳುಹಿಸಲಾಗಿದ್ದು, ಅಧಿಕಾರಿಗಳು ವಿದ್ಯಾರ್ಥಿಗಳನ್ನು ಅಪಾಯದಿಂದ ಪಾರು ಮಾಡಲು ಸಹಾಯ ಮಾಡಿದರು. ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ದಿಲ್ಲಿ ಅಗ್ನಿಶಾಮಕ ಸೇವೆಗಳ ನಿರ್ದೇಶಕ ಅತುಲ್ ಗಾರ್ಗ್ ತಿಳಿಸಿದ್ದಾರೆ.

Advertisement

ಪೊಲೀಸರ ಪ್ರಕಾರ, ವಿದ್ಯುತ್ ಮೀಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಉಪಕರಣದಿಂದ ಹೊರಹೊಮ್ಮುವ ಹೊಗೆಯಿಂದಾಗಿ ವಿದ್ಯಾರ್ಥಿಗಳು ಭಯಭೀತರಾದರು ಮತ್ತು ಕೋಚಿಂಗ್ ಸೆಂಟರ್‌ನ ಹಿಂಭಾಗದಿಂದ ಕೆಳಗೆ ಇಳಿಯಲು ಪ್ರಾರಂಭಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next