ಪ್ಯಾಲೆಸ್ತೀನ್(ಗಾಜಾ): ಇಸ್ರೇಲ್ ನ ಡಿಫೆನ್ಸ್ ಪಡೆಗಳು (ಐಡಿಎಫ್) ಗಾಜಾದಲ್ಲಿರುವ ಪ್ಯಾಲೆಸ್ತೀನ್ ಯೂನಿರ್ವಸಿಟಿಯ ಮೇಲೆ ಬಾಂಬ್ ದಾಳಿ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಏತನ್ಮಧ್ಯೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋ ಕುರಿತು ಇಸ್ರೇಲ್ ಸ್ಪಷ್ಟನೆ ನೀಡುವಂಎ ಅಮೆರಿಕ ತಿಳಿಸಿರುವುದಾಗಿ ವರದಿಯಾಗಿದೆ.
ಇದನ್ನೂ ಓದಿ:Jaggesh; ಮಾರ್ಚ್ 8ಕ್ಕೆ ‘ರಂಗನಾಯಕ’: ಗುರುಪ್ರಸಾದ್-ಜಗ್ಗೇಶ್ ಕಾಂಬಿನೇಶನ್ ಚಿತ್ರ
ವಿಡಿಯೋದಲ್ಲಿ ವಿದ್ಯಾರ್ಥಿ ರಹಿತವಾದ ಯೂನಿರ್ವಸಿಟಿ ಕಟ್ಟಡದ ಮೇಲೆ ಭಾರೀ ಪ್ರಮಾಣದ ಬಾಂಬ್ ದಾಳಿ ನಡೆಸಿರುವುದು ಸೆರೆಯಾಗಿದ್ದು, ಇಡೀ ಯೂನಿರ್ವಸಿಟಿ ಕಟ್ಟಡ ಮತ್ತು ಸುತ್ತಮುತ್ತಲಿನ ಪ್ರದೇಶ ಧ್ವಂಸವಾಗಿರುವುದಾಗಿ ವರದಿ ವಿವರಿಸಿದೆ.
ಸಮರ್ಪಕವಾದ ಮಾಹಿತಿ ಇಲ್ಲದಿರುವ ಕಾರಣ ವಿಡಿಯೋ ಕುರಿತು ಯಾವುದೇ ಹೇಳಿಕೆಯನ್ನು ನೀಡಲು ಅಮೆರಿಕ ವಿದೇಶಾಂಗ ಇಲಾಖೆಯ ವಕ್ತಾರ ಡೇವಿಡ್ ಮಿಲ್ಲರ್ ನಿರಾಕರಿಸಿರುವುದಾಗಿ ವರದಿ ತಿಳಿಸಿದೆ.
ಖಾನ್ ಯೂನಿಸ್ ನ ಪ್ರತ್ಯಕ್ಷದರ್ಶಿ ವರದಿಯ ಪ್ರಕಾರ, ದಕ್ಷಿಣ ಗಾಜಾ ಪ್ರದೇಶದಲ್ಲಿ ವೈಮಾನಿಕ ದಾಳಿ ಮುಂದುವರಿದಿದ್ದು, ಇಸ್ರೇಲ್ ಮಿಲಿಟರಿ ಪಡೆ ಹಮಾಸ್ ಉಗ್ರರ ಹಿಡಿತದಲ್ಲಿರುವ ಪ್ರದೇಶವನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಿರುತ್ತಿರುವುದಾಗಿ ವರದಿಯಾಗಿದೆ.
ಅಕ್ಟೋಬರ್ 7ರಂದು ಹಮಾಸ್ ಪಡೆ ಇಸ್ರೇಲ್ ಮೇಲೆ ದಾಳಿ ನಡೆಸಿದ ನಂತರ ಎರಡು ದೇಶಗಳ ನಡುವೆ ಯುದ್ಧ ಆರಂಭಗೊಂಡಿದ್ದು, ಉಭಯ ದೇಶಗಳು ಕೂಡಲೇ ಯುದ್ಧ ನಿಲ್ಲಿಸಿ ಕದನ ವಿರಾಮ ಘೋಷಿಸುವಂತೆ ವಿಶ್ವಸಂಸ್ಥೆ ಎಚ್ಚರಿಕೆ ನೀಡಿತ್ತು. ಆದರೆ ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧ ಮುಂದುವರಿದಿದೆ.