ನೋಯ್ಡಾ: ಕಾಲೇಜು ಕ್ಯಾಂಪಸ್ ನಲ್ಲಿ ವಿದ್ಯಾರ್ಥಿ ಹಾಗೂ ಭದ್ರತಾ ಸಿಬ್ಬಂದಿಗಳ ನಡುವೆ ವಾಗ್ವಾದ ಉಂಟಾಗಿ, ಘರ್ಷಣೆ ನಡೆದೆ ಘಟನೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಗ್ರೇಟರ್ ನೋಯ್ಡಾದ ಗೌತಮ್ ಬುದ್ಧ ವಿಶ್ವವಿದ್ಯಾನಿಲಯದಲ್ಲಿ ಘರ್ಷಣೆ ಸಂಭವಿಸಿದ್ದು, ಕ್ಯಾಂಪಸ್ ಒಳಗೆ ಇರುವ ಮುನ್ಶಿ ಪ್ರೇಮಚಂದ್ ಹಾಸ್ಟೆಲ್ ನಲ್ಲಿ ಕೆಲ ವಿದ್ಯಾರ್ಥಿಗಳು ಸಿಗರೇಟ್ ಸೇದುತ್ತಿದ್ದರು. ಇದನ್ನು ತಡೆಯಲು ಹೋದ ಭದ್ರತಾ ಸಿಬ್ಬಂದಿ ಜೊತೆಗೆ ವಿದ್ಯಾರ್ಥಿಗಳು ವಾಗ್ವಾದ ನಡೆಸಿದ ಪರಿಣಾಮ ಈ ಘಟನೆ ನಡೆದಿದೆ ಎನ್ನಲಾಗಿದೆ.
ಭಾನುವಾರ 10:30 ರ ಹೊತ್ತಿಗೆ ವಿದ್ಯಾರ್ಥಿಗಳ ಬಳಿ ಹೋಗಿ ಕ್ಯಾಂಪಸ್ ಒಳಗೆ ಸಿಗರೇಟ್ ಸೇದಬೇಡಿ ಎಂದು ಖಾಸಗಿ ಭದ್ರತಾ ಸಿಬ್ಬಂದಿ ಹೇಳಿದ್ದಾರೆ. ಇದೇ ವಿಚಾರಕ್ಕೆ ಭದ್ರತಾ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳ ನಡುವೆ ವಾಗ್ವಾದ ಉಂಟಾಗಿ ಘರ್ಷಣೆ ಉಂಟಾಗಿದೆ.
ಘಟನೆ ಸಂಬಂಧ ಎರಡೂ ಕಡೆಯಿಂದ ದೂರು ಬಂದಿದ್ದು, ಪೊಲೀಸರು 33 ಭದ್ರತಾ ಸಿಬ್ಬಂದಿಗಳು ಸೇರಿದಂತೆ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
ಕೆಲವರು ಕೋಲು ಹಿಡಿದು ಹಾಸ್ಟೆಲ್ ಹೊರಗೆ ನಿಲ್ಲಿಸಿದ್ದ ವಾಹನಗಳಿಗೆ ಹಾನಿ ಮಾಡಿದ್ದು, ಕಾರುಗಳ ಗ್ಲಾಸ್ ಗಳನ್ನು ಪುಡಿಗೈಯುತ್ತಿರುವ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.