Advertisement

ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ: ಉನ್ನತ ಮಟ್ಟದ ತನಿಖೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

01:02 PM May 09, 2024 | Team Udayavani |

ಮಂಗಳೂರು: ಮೆಡಿಕಲ್ ಕಾಲೀಜಿನ ಮಹಿಳಾ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿ ಉನ್ನತ ಮಟ್ಟದ ತನಿಖೆ ನಡೆಸುವಂತೆ ವಿಶ್ವ ಹಿಂದೂ ಪರಿಷದ್ ಆಗ್ರಹಿಸಿದೆ.

Advertisement

ಕಳೆದ ದಿನ ಮೇ 8 ರಂದು ಮಂಗಳೂರಿನ ಖಾಸಗಿ ಮೆಡಿಕಲ್ ಕಾಲೇಜಿನ ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಇರಿಸಿ, ಮಹಿಳೆಯರ ಖಾಸಗಿ ವಿಡಿಯೋ ಚಿತ್ರೀಕರಣ ನಡೆಸಿದ ವ್ಯಕ್ತಿಯನ್ನು ಭದ್ರತಾ ಸಿಬ್ಬಂದಿಯ ಮಾಹಿತಿಯ ಮೇರೆಗೆ ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಅತ್ಯಂತ ಗಂಭೀರವಾಗಿದೆ.

ಈ ಕೃತ್ಯ ನಡೆಸಿದ ಬಾಲಕ ಇಂತಹ ಮಾನಸಿಕತೆ ಹೊಂದಿರಲು ಇವನು ಯಾವುದೇ ಜಿಹಾದಿ ಸಂಘಟನೆಗೆ ಸೇರಿಸುವ ಸಂಶಯ ಬಲವಾಗಿದ್ದು, ಅಲ್ಲದೆ ವ್ಯವಸ್ಥಿತ ತಂಡ ಬಾಲಕನನ್ನು ಇಂತಹ ಕೃತ್ಯ ನಡೆಸಲು ಪ್ರೇರೇಪಿಸುವ ಸಾಧ್ಯತೆ ಇದೆ.

ಉಡುಪಿಯಲ್ಲಿ ಇಂತಹ ಘಟನೆ ನಡೆದಿದ್ದು ಆ ಘಟನೆಯ ಹಿಂದೆ ಜಿಹಾದಿ ಸಂಘಟನೆಯ ಕೈವಾಡವಿತ್ತು. ಹಾಗಾಗಿ ಈ ಪ್ರಕರಣವನ್ನು ಉನ್ನತ ಮಟ್ಟದ ತನಿಖೆ ನಡೆಸಬೇಕು ಅಲ್ಲದೆ ಈ ಕೃತ್ಯ ನಡೆಸಿರುವವನ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಈ ಮೂಲಕ ಆಗ್ರಹಿಸುತ್ತೇವೆ ಎಂದು ವಿಶ್ವ ಹಿಂದೂ ಪರಿಷದ್ ಜಿಲ್ಲಾಧ್ಯಕ್ಷರಾದ ಎಚ್ ಕೆ ಪುರುಷೋತ್ತಮ ಮತ್ತು ಜಿಲ್ಲಾ ಕಾರ್ಯದರ್ಶಿ ರವಿ ಅಸೈಗೋಳಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ: Ravichandran ಡ್ರೀಮ್‌ ಪ್ರಾಜೆಕ್ಟ್ ಪ್ರೇಮಲೋಕ-2ಗೆ ತಮಿಳಿನ ತೇಜು ಅಶ್ವಿ‌ನಿ?

Advertisement
Advertisement

Udayavani is now on Telegram. Click here to join our channel and stay updated with the latest news.

Next