ದುಬೈ: ಕಳೆದ ಕೆಲ ದಿನಗಳಿಂದ ದುಬೈಯಲ್ಲಿ ಮಳೆಯಾಗುತ್ತಿದ್ದು ಮಂಗಳವಾರ ಸುರಿದ ಧಾರಾಕಾರ ಮಳೆಯಿಂದ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದ್ದು ಜನ ಜೀವನ ಅಸ್ತವ್ಯಸ್ಥಗೊಂಡಿದೆ.
ಮಂಗಳವಾರ ಸುರಿದ ಬಾರಿ ಮಳೆಯಿಂದ ವಿಮಾನ ನಿಲ್ದಾಣದಲ್ಲಿ ನೀರು ನಿಂತು ಪ್ರವಾಹದ ಪರಿಸ್ಥಿತಿ ನಿರ್ಮಾಣ ವಾಗಿದೆ ಪರಿಣಾಮ ಕೆಲ ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಲಾಯಿತು ಜೊತೆಗೆ ದುಬೈ ವಿಮಾನ ನಿಲ್ದಾಣಕ್ಕೆ ಬರಬೇಕಾಗಿದ್ದ ಕೆಲ ವಿಮಾನಗಳ ಮಾರ್ಗಗಳನ್ನು ಬದಲಾಯಿಸಲಾಯಿತು. ಮಳೆಯ ಆರ್ಭಟಕ್ಕೆ ಕೆಲ ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಜನಜೀವನ ಅಸ್ತವ್ಯಸ್ಥಗೊಂಡಿದೆ.
ದುಬೈ ವಿಮಾನ ನಿಲ್ದಾಣದಲ್ಲಿ ವಿಮಾನವೊಂದು ಪ್ರವಾಹದ ನೀರಿನ ನಡುವೆ ಸಾಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮನೆಗಳ ಮುಂದೆ ನಿಲ್ಲಿಸಿದ್ದ ಕಾರುಗಳು ನೀರಿನಲ್ಲಿ ಮುಳುಗಿ ಹೋಗಿದ್ದು ರಸ್ತೆ ಸಂಚಾರ ಕಷ್ಟ ಸಾಧ್ಯವಾಗಿದೆ.
ಮಂಗಳವಾರದಂದು ಕೇವಲ 12 ಗಂಟೆಗಳಲ್ಲಿ ವಿಮಾನ ನಿಲ್ದಾಣದಲ್ಲಿ ಸುಮಾರು 100 ಮಿಮೀ ಮಳೆಯಾಗಿದ್ದು ಒಟ್ಟು 24 ಗಂಟೆಗಳಲ್ಲಿ 160 ಮಿಮೀ ಮಳೆಯಾಗಿದ್ದು ಇದು ದಾಖಲೆಯ ಮಳೆಯಾಗಿದೆ ಎಂದು ಹೇಳಲಾಗಿದೆ.