Advertisement

Mangaluru: ವಿಧಾನ ಪರಿಷತ್‌ ಉಪ ಚುನಾವಣೆ… ಮತ ಎಣಿಕೆ ಪ್ರಕ್ರಿಯೆ ಆರಂಭ

08:53 AM Oct 24, 2024 | Team Udayavani |

ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ವಿಧಾನ ಪರಿಷತ್‌ ಉಪ ಚುನಾವಣೆಯ ಮತ ಎಣಿಕೆ ಗುರುವಾರ (ಅ.24)ರಂದು ಮಂಗಳೂರಿನ ಸಂತ ಅಲೋಶಿಯಸ್‌ ಪದವಿ ಪೂರ್ವ ಕಾಲೇಜಿನಲ್ಲಿ ಬೆಳಗ್ಗೆ 8 ಗಂಟೆಗೆ ಆರಂಭಗೊಂಡಿದೆ.

Advertisement

ಅ.21ರಂದು ನಡೆದ ಚುನಾವಣೆಯಲ್ಲಿ ಒಟ್ಟು 392 ಮತಗಟ್ಟೆಗಳಲ್ಲಿ 5,906 ಮತದಾರರು ಮತ ಚಲಾಯಿಸಿದ್ದರು.

ಈಗಾಗಲೇ ಮತ ಎಣಿಕೆ ಕಾರ್ಯ ಆರಂಭಗೊಂಡಿದ್ದು ಮೊದಲ ಹಂತದಲ್ಲಿ ಒಟ್ಟು ಮತಗಳ ಎಣಿಕೆ ಮತ್ತು ಮಿಶ್ರಣ ಕಾರ್ಯ ನಡೆಯಲಿದೆ, ಎರಡನೇ ಹಂತದಲ್ಲಿ ಮತಪತ್ರಗಳ ಸಿಂಧುತ್ವ ಪರಿಶೀಲನೆ ಮಾಡಿ ಅನಂತರ ಒಂದನೇ ಪ್ರಾಶಸ್ತ್ಯದ ಮತಗಳ ಎಣಿಕೆ ಮಾಡಲಾಗುತ್ತದೆ. ನಿಗದಿತ ಕೋಟವನ್ನು ಮೊದಲ ಪ್ರಾಶಸ್ತ್ಯ ದಲ್ಲಿ ಪಡೆದ ಅಭ್ಯರ್ಥಿಯ ಆಯ್ಕೆಯನ್ನು ಘೋಷಿಸಲಾಗುವುದು.

ಕೇಂದ್ರ ಚುನಾವಣಾ ವೀಕ್ಷಕ ಪಂಕಜ್ ಕುಮಾರ್ ಪಾಂಡೆ, ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next