Advertisement

Vidhan Parishad; ವಿಪಕ್ಷ ನಾಯಕರಾಗಿ ಕೋಟ ಶ್ರೀನಿವಾಸ ಪೂಜಾರಿ ನೇಮಕ

03:05 PM Dec 25, 2023 | Team Udayavani |

ಬೆಂಗಳೂರು: ಕರ್ನಾಟಕ ವಿಧಾನಪರಿಷತ್ ನ ವಿರೋಧ ಪಕ್ಷದ ನಾಯಕರನ್ನಾಗಿ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ನೇಮಕ ಮಾಡಲಾಗಿದೆ.

Advertisement

ಸೋಮವಾರ ಈ ಬಗ್ಗೆ ಅಧಿಕೃತ ಘೋಷಣೆ ಮಾಡಲಾಗಿದೆ. ಪರಿಷತ್ ವಿರೋಧ ಪಕ್ಷದ ಉಪನಾಯಕರಾಗಿ ಸುನೀಲ್ ವಲ್ಯಾಪುರೆ, ಮುಖ್ಯ ಸಚೇತಕರಾಗಿ ಎನ್.ರವಿಕುಮಾರ್ ಅವರನ್ನು ನೇಮಿಸಲಾಗಿದೆ.

ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕರನ್ನಾಗಿ ಅರವಿಂದ ಬೆಲ್ಲದ್ ಅವರನ್ನು ನೇಮಿಸಲಾಗಿದೆ. ಮುಖ್ಯ ಸಚೇತಕರನ್ನಾಗಿ ದೊಡ್ಡನಗೌಡ ಜಿ ಪಾಟೀಲ್ ಅವರನ್ನು ನೇಮಿಸಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆದೇಶಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next