Advertisement
ನಗರದ ಸೇವಾ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಮಹಿಳಾ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ ಗೃಹಿಣಿಯರಿಗೆ ಮಾಸಿಕ 2 ಸಾವಿರ ರೂ., ಮತ್ತು ಒಂದು ಮನೆಗೆ 200 ಯೂನಿಟ್ ವಿದ್ಯುತ್ ಹಾಗೂ 10 ಕೆ.ಜಿ. ಅಕ್ಕಿ ನೀಡುವುದಾಗಿ ಸುಳ್ಳು ಆಶ್ವಾಸನೆಗಳನ್ನು ಜನಗಳಿಗೆ ನೀಡಿ ದಿಕ್ಕು ತಪ್ಪಿಸುವ ಕೆಲಸವನ್ನು ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ. ಅವರು ನೀಡಿರುವ ಭರವಸೆಗಳು ನಮ್ಮ ರಾಜ್ಯದ ಬಜೆಟ್‌ಗಿಂತಲೂ ದುಪ್ಪಟ್ಟು ಆಗಿದೆ. ಅದು ಅನುಷ್ಠಾನಗೊಳಿಸಲು ಸಾಧ್ಯವೇ? ಎಂದು ಪ್ರಶ್ನಿಸಿದ ಅವರು, ಜನಗಳ ಮೇಲೆ ಅವರಿಗೆ ಅಷ್ಟು ಕಾಳಜಿ ಅಥವಾ ವಿಶ್ವಾಸ ಇದ್ದರೆ ಮೊದಲು ಈ ಯೋಜನೆ ಗಳನ್ನು ನಿಮ್ಮದೇ ಸರ್ಕಾರ ಇರುವ ರಾಜಸ್ಥಾನದಲ್ಲಿ ಅನುಷ್ಠಾನಗೊಳಿಸಿ ನಂತರ ಕರ್ನಾಟಕದಲ್ಲಿ ಅನುಷ್ಠಾನಗೊಳಿಸಿ ಎಂದು ಸವಾಲೆಸೆದರು.
Related Articles
Advertisement
ಬಿಜೆಪಿ ತಾಲೂಕು ಮುಖಂಡ ಸೀಕಲ್ ರಾಮಚಂದ್ರಗೌಡ, ಮಾಜಿ ಶಾಸಕ ಎಂ. ರಾಜಣ್ಣ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯದರ್ಶಿ ಪದ್ಮಪ್ರಕಾಶ್, ನಿಶ್ಚಿತ ರೆಡ್ಡಿ, ಜಿಲ್ಲಾಧ್ಯಕ್ಷ ಲೀಲಾವತಿ ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ನರ್ಮದಾ ರೆಡ್ಡಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಮಲಿಂಗಪ್ಪ, ಮುಖಂಡ ಮುನಿರಾಜು, ಜಿಲ್ಲಾ ಉಪಾಧ್ಯಕ್ಷ ಅರುಣ ಬಾಬು, ಮಿಟ್ಟಹಳ್ಳಿ ಮಂಜು, ಶಿಡ್ಲಘಟ್ಟ ತಾಲೂಕು ಬಿಜೆಪಿ ಮಹಿಳಾ ಮೋರ್ಚಾ ಗ್ರಾಮಾಂತರ ಅಧ್ಯಕ್ಷ ಕಮಲಾ, ನಗರ ಅಧ್ಯಕ್ಷ ತ್ರಿವೇಣಿ, ಶಿಡ್ಲಘಟ್ಟ ಗ್ರಾಮಾಂತರ ಮಂಡಳ ಅಧ್ಯಕ್ಷ ಸುರೇಂದ್ರ ಗೌಡ, ನಗರ ಮಂಡಲ ಅಧ್ಯಕ್ಷ ರಘು, ಭಾಜಪ ಮುಖಂಡ ಆನಂದಗೌಡ ಹಾಗೂ ಮತ್ತಿತರರು ಇದ್ದರು.
ಬಿಜೆಪಿ ಅಧಿಕಾರಕ್ಕೆ ತರಲು ಸಹಕರಿಸಿ: ಭಾರತಿ ಶೆಟ್ಟಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶ ಪ್ರಗತಿಪಥದತ್ತ ಸಾಗುತ್ತಿದೆ. ಪ್ರಧಾನಮಂತ್ರಿಗಳು ಕೇವಲ ಒಂದು ವ್ಯಕ್ತಿಯಲ್ಲ, ಅವರೊಂದು ಶಕ್ತಿ. ಯೋಗಿ ಆಗಿದ್ದಾರೆ. ದೇಶದ ಎಲ್ಲರ ಕಲ್ಯಾಣಕ್ಕಾಗಿ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಹಿಳೆಯರ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಿದೆ. ಹೀಗಾಗಿ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಬೆಂಬಲಿಸಿ ಕರ್ನಾಟಕದಲ್ಲಿ ಮತ್ತು ಕೇಂದ್ರದಲ್ಲಿ ಭಾಜಪ ಸರ್ಕಾರವನ್ನು ಅಧಿಕಾರಕ್ಕೆ ತರಲು ಬೆಂಬಲಿಸಿ ಸಹಕರಿಸಬೇಕು ಎಂದು ವಿಧಾನ ಪರಿಷತ್ತಿನ ಸದಸ್ಯೆ ಭಾರತಿ ಶೆಟ್ಟಿ ಮನವಿ ಮಾಡಿದರು.