Advertisement
ಮೂರು ಪಕ್ಷಗಳಲ್ಲಿನ ಮುಖಂಡರು ಪಕ್ಷಾಂತರ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಚುನಾವಣ ರಣರಂಗಕ್ಕೆ ಸಿದ್ಧವಾಗುತ್ತಿದ್ದಾರೆ.
ವಿಧಾನಸಭಾ ಚುನಾವಣೆಯ ದಿನ ಎಣಿಸು ತ್ತಿರುವ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಈಗಾಗಲೇ ಸಿದ್ಧತೆ ಆರಂಭಿಸಿರು ವಂತೆಯೇ ಜಿಲ್ಲೆಯಲ್ಲಿರುವ ಹನ್ನೊಂದು ವಿಧಾನ ಸಭಾ ಕ್ಷೇತ್ರಗಳಲ್ಲಿ ಈಗ ಹಾಲಿ ಇರುವ ಶಾಸಕರು ಮತ್ತೆ ತಮ್ಮ ಅದೃಷ್ಟ ಪರೀಕ್ಷಿಸಿಕೊಳ್ಳಲು ಕ್ಷೇತ್ರವಾರು ಪ್ರವಾಸ ಆರಂಭಿಸಿದ್ದಾರೆ. ಅದೇ ರೀತಿ ಕಳೆದ ಚುನಾವಣೆಯಲ್ಲಿ ಪರಾಭವಗೊಂಡವರು ಈ ಬಾರಿಯೂ ತಮ್ಮ ಅದೃಷ್ಟ ಪರೀಕ್ಷೆ ಮಾಡಿಕೊಳ್ಳಲು ಸಂಘಟನೆಯಲ್ಲಿ ತೊಡಗಿದ್ದಾರೆ.
Related Articles
Advertisement
ಇವರ ಎದುರಾಳಿ ಪಕ್ಷದ ಮುಖಂಡರು ಕೂಡ ಈ ಬಾರಿ ಕ್ಷೇತ್ರವನ್ನು ತಮ್ಮದಾಗಿಸಿಕೊಳ್ಳಬೇಕು ಎನ್ನುವ ಪ್ರಯತ್ನದಲ್ಲಿ ನಿರತರಾಗಿದ್ದಾರೆ.
ಪಕ್ಷಾಂತರ ಪರ್ವ ಆರಂಭ: ಪ್ರತೀ ವಿಧಾನಸಭಾ ಚುನಾವಣೆ ವೇಳೆಯಲ್ಲಿ ವಿವಿಧ ಪಕ್ಷಗಳಿಂದ ಮುಖಂಡರು ಪಕ್ಷಾಂತರ ಮಾಡುವುದು ಸಾಮಾನ್ಯ. ಅದರಂತೆ ಚುನಾವಣೆಗೆ ಒಂದು ವರ್ಷ ಮೊದಲೇ ಜಿಲ್ಲೆಯಲ್ಲಿ ಒಂದು ಪಕ್ಷದಿಂದ ಮತ್ತೂಂದು ಪಕ್ಷಕ್ಕೆ ಹೋಗುತ್ತಿದ್ದಾರೆ. ಜೆಡಿಎಸ್, ಕಾಂಗ್ರೆಸ್ ಪಕ್ಷಗಳಿಂದ ಬಿಜೆಪಿ ಪಕ್ಷಕ್ಕೆ ಮತ್ತು ಬಿಜೆಪಿ ಪಕ್ಷದಿಂದ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಜಿಗಿಯುವ ಪ್ರಕ್ರಿಯೆಗೆ ಚಾಲನೆ ದೊರೆತಿದೆ.
ಜೆಡಿಎಸ್‌ನಿಂದ ಸ್ಪರ್ಧಿಸಿ ಪರಿಷತ್ ಸದಸ್ಯರಾಗಿದ್ದ ಬೆಮೆಲ್ ಕಾಂತರಾಜು ಅವರು ಜೆಡಿಎಸ್ ತೊರೆದು ಕೈ ಹಿಡಿದಿದ್ದಾರೆ. ತುರುವೇಕೆರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಎಲ್ಲ ರೀತಿಯ ತಯಾರಿ ನಡೆಸುತ್ತಿದ್ದಾರೆ. ಗುಬ್ಬಿ ವಿಧಾನಸಭಾ ಕ್ಷೇತ್ರದ ಶಾಸಕರೂ ಮಾಜಿ ಸಚಿವರಾದ ಎಸ್.ಆರ್ ಶ್ರೀನಿವಾಸ್ ಈಗಾಗಲೇ ಜೆಡಿಎಸ್‌ನಿಂದ ದೂರವಿದ್ದಾರೆ. ಅವರೂ ಕೂಡ ಕಾಂಗ್ರೆಸ್ ಸೇರಲಿದ್ದಾರೆ ಎನ್ನಲಾಗುತ್ತಿದೆ. ಈಗಾಗಲೇ ಕಾಂಗ್ರೆಸ್ ಮುಖಂಡರ ಸಭೆ ಮಾಡಿರುವ ಅವರು ಅಧಿಕೃತವಾಗಿ ಘೋಷಣೆ ಮಾಡಬೇಕಾಗಿರುವುದು ಮಾತ್ರ ಬಾಕಿಯಿದೆ.
ತುಮಕೂರು ನಗರ ಕ್ಷೇತ್ರದಲ್ಲಿ ಹಾಲಿ ಶಾಸಕ ಜಿ.ಬಿ.ಜ್ಯೋತಿಗಣೇಶ್ ಇದ್ದರೂ, ಆಡಳಿತಾರೂಢ ಬಿಜೆಪಿಯಲ್ಲಿ ಒಂದು ಗುಂಪಿನಿಂದ ಆಂತರಿಕ ಬೇಗುದಿ ಎದ್ದಿದೆ. ಕುಣಿಗಲ್ ಕ್ಷೇತ್ರದ ಹಾಲಿ ಕಾಂಗ್ರೆಸ್ ಶಾಸಕ ಡಾ| ರಂಗನಾಥ್ ಇದ್ದರೂ ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ ಕಾಂಗ್ರೆಸ್ ಟಿಕೆಟ್ ಮೇಲೆ ಕಣ್ಣಿಟ್ಟಿದ್ದಾರೆ ಮತ್ತು ಶಿರಾದಲ್ಲಿ ಮಾಜಿ ಸಚಿವ ಟಿ.ಬಿ.ಜಯಚಂದ್ರ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಯಾಗಿದ್ದರೂ ಸಾಸಲು ಸತೀಶ್ ಪಕ್ಷದ ಟಿಕೆಟ್ ಮೇಲೆ ಕಣ್ಣಿಟ್ಟಿ ದ್ದಾರೆ. ಚಿಕ್ಕನಾಯಕನಹಳ್ಳಿಯಲ್ಲಿ ಹಾಲಿ ಸಚಿವ ಜೆ.ಸಿ . ಮಾಧುಸ್ವಾಮಿ ಇದ್ದರೂ ಮಾಜಿ ಶಾಸಕ ಕೆ.ಎಸ್.ಕಿರಣ್ ಕುಮಾರ್ ಬಿಜೆಪಿ ಟಿಕೆಟ್ ಮೇಲೆ ಕಣ್ಣಿಟ್ಟಿದ್ದಾರೆ. ಈ ರೀತಿ ಜಿಲ್ಲೆಯ ಹನ್ನೊಂದು ವಿಧಾನಸಭಾ ಕ್ಷೇತ್ರಗಳಲ್ಲಿಯೂ ರಾಜಕೀಯ ಚದುರಂಗದಾಟಗಳು ಆರಂಭಗೊಂಡಿವೆ.
– ಚಿ.ನಿ.ಪುರುಷೋತ್ತಮ್