ಬೆಂಗಳೂರು : ನಾಳೆಯಿಂದ ಫೆಬ್ರವರಿ 5ರ ವರೆಗೆ ಒಟ್ಟು ಏಳು ದಿನಗಳ ಕಾಲ ವಿಧಾನ ಮಂಡಲ ಅಧಿವೇಶನ ಆರಂಭಗೊಳ್ಳಲಿದ್ದು, ಈ ಭಾರಿ ಹನ್ನೊಂದು ವಿಧೇಯಕ ಮಂಡನೆಯಾಗಲಿದೆ ಎಂದು ವಿಧಾನ ಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.
ಅಧಿವೇಶನದ ಮೊದಲ ದಿನ(ಗುರುವಾರ) 11 ಗಂಟೆಗೆ ರಾಜ್ಯಪಾಲರು ಸದನವನ್ನು ಉದ್ದೇಶಿಸಿ ಮಾತನಾಡಲಿದ್ದು ಬಳಿಕ ಅಗಲಿದ ಗಣ್ಯರಿಗೆ ಸಂತಾಪ ಸೂಚನೆ ನಡೆಯಲಿದೆ.
ಪ್ರಸ್ತುತ ಮೂರು ಅಧ್ಯಾದೇಶಗಳನ್ನು ಸರಕಾರ ಹೊರಡಿಸಿದ್ದು ಇವು ವಿದೇಯಕ ರೂಪದಲ್ಲಿ ಸದನದಲ್ಲಿ ಮಂಡನೆಯಾಗಲಿದೆ, ಅಧಿವೇಶನದಲ್ಲಿ ಆರು ದಿನಗಳ ಕಾಲ ಪ್ರಶ್ನೋತ್ತರ ಅವಧಿ ನಿಗದಿಪಡಿಸಲಾಗಿದೆ.
ಇದನ್ನೂ ಓದಿ:ಹುಣಸೋಡು ಸ್ಫೋಟ ಪ್ರಕರಣದ ತನಿಖೆ ಹೈಕೋರ್ಟ್ ನ್ಯಾಯಾಧೀಶರಿಂದ ನಡೆಯಲಿ : ಸಿದ್ದರಾಮಯ್ಯ
ವಿಧಾನ ಮಂಡಲ ಪ್ರವೇಶಿಸುವ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯವಾಗಿದೆ.
ಪ್ರತೀ ದಿನ ಅಧಿವೇಶನ ಮುಕ್ತಾಯವಾದ ಬಳಿಕ ವಿಧಾನ ಸಭೆ ಸಭಾಂಗಣವನ್ನು ಸ್ಯಾನಿಟೈಸ್ ಮಾಡಲಾಗುತ್ತದೆ.