Advertisement

ಫೆ. 9ಕ್ಕೆ ಪರಿಷತ್‌ ಸಭಾಪತಿ ಚುನಾವಣೆ : ಬಸವರಾಜ ಹೊರಟ್ಟಿ ಆಯ್ಕೆ ಬಹುತೇಕ ಖಚಿತ

12:23 AM Feb 06, 2021 | Team Udayavani |

ಬೆಂಗಳೂರು: ವಿಧಾನಪರಿಷತ್‌ ಸಭಾಪತಿ ಚುನಾವಣೆಗೆ ಫೆ. 9ರಂದು ದಿನಾಂಕ ನಿಗದಿಯಾಗಿದೆ. ಬಿಜೆಪಿ -ಜೆಡಿಎಸ್‌ ಬೆಂಬಲದೊಂದಿಗೆ ಜೆಡಿಎಸ್‌ನ ಬಸವರಾಜ ಹೊರಟ್ಟಿ ಸಭಾಪತಿಯಾಗಿ ಆಯ್ಕೆಯಾಗುವುದು ಬಹುತೇಕ ಖಚಿತ.

Advertisement

ಸಭಾಪತಿ ಚುನಾವಣೆ ಹಿನ್ನೆಲೆಯಲ್ಲಿ ಪರಿಷತ್‌ ಕಲಾಪವನ್ನು ಫೆ. 10ರ ವರೆಗೆ ಮುಂದುವರಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಶುಕ್ರವಾರ ತೀರ್ಮಾನಿಸಲಾಯಿತು.

ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಅವರ ರಾಜೀನಾಮೆ ಪತ್ರ ಅಂಗೀಕರಿಸಿ ಪರಿಷತ್‌ ಕಲಾಪ ಮುಂದುವರಿಕೆ ಮತ್ತು ಸಭಾಪತಿ ಚುನಾವಣೆ ನಿಗದಿಗೆ ರಾಜ್ಯಪಾಲರು ಅನುಮತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next