Advertisement

ಗರಿಷ್ಠ ಪ್ರಮಾಣದ ಮತದಾನಕ್ಕೆ ಪ್ರಯತ್ನ: ಸಿಇಒ ಪ್ರಸನ್ನ

12:31 AM Feb 16, 2023 | Team Udayavani |

ಉಡುಪಿ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಗರಿಷ್ಠ ಮತದಾನಕ್ಕೆ ಬೇಕಾದ ಕ್ರಮವನ್ನು ಕೈಗೊಳ್ಳುವಂತೆ ಸ್ವೀಪ್‌ ಸಮಿತಿ ಜಿ.ಪಂ. ಸಿಇಒ ಪ್ರಸನ್ನ ಎಚ್‌. ಸೂಚಿಸಿದರು.

Advertisement

ಜಿ.ಪಂ. ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಸ್ವೀಪ್‌ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಎಲ್ಲ ಇಲಾಖೆಗಳು ತಮ್ಮ ದೈನಂದಿನ ಚಟುವಟಿಕೆಗಳಲ್ಲಿ ಮತದಾನ ಜಾಗೃತಿ ಕಾರ್ಯಕಮ್ರಗಳನ್ನು ಜೋಡಿಸಿಕೊಂಡು, ವಿದ್ಯುನ್ಮಾನ ಮತಯಂತ್ರದ ಬಳಕೆ, ವಿವಿ ಪ್ಯಾಟ್‌ ಮಹತ್ವದ ಬಗ್ಗೆ ಪ್ರಾತ್ಯಕ್ಷಿಕೆಗಳನ್ನು ಆಯೋಜಿಸುವಂತೆ ನಿರ್ದೇಶಿಸಿದರು.

ಜಿಲ್ಲೆಯಲ್ಲಿ ಎಲ್ಲ ಹಾಸ್ಟೆಲ್‌ಗ‌ಳಲ್ಲಿ ವಿದ್ಯಾರ್ಥಿಗಳಿಗೆ, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಕೊರಗ ಸಮುದಾಯದ ಹಾಡಿಗಳಲ್ಲಿ ವಿಶೇಷವಾಗಿ ಮತದಾನ ಜಾಗೃತಿ ಕಾರ್ಯಕ್ರಮ ನಡೆಸಲು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಗೊಂದು ಥೀಮ್‌
ಚುನಾವಣ ಆಯೋಗವು ಪ್ರತೀ ಜಿಲ್ಲೆಗೆ ಪ್ರತ್ಯೇಕ ಥೀಮ್‌ ಬಳಸಿ ಒಂದು ಮತಗಟ್ಟೆಯನ್ನು ನಿರ್ಮಿಸುವಂತೆ ತಿಳಿಸಿದ್ದು, ಅದರಂತೆ ಜಿಲ್ಲೆಯಲ್ಲಿ ಯಕ್ಷಗಾನ ಅಥವಾ ಕಂಬಳವನ್ನು ಬಿಂಬಿಸುವ ರೀತಿಯಲ್ಲಿ ಮತಗಟ್ಟೆಯನ್ನು ಅಲಂಕರಿಸಲು ಮತ್ತು ಸ್ಥಳೀಯ ನೈಸರ್ಗಿಕ ಪರಿಕರಗಳನ್ನು ಬಳಸಿ ಚಪ್ಪರ ಹಾಕಲು ಪೂರ್ವ ತಯಾರಿ ಮಾಡಿಕೊಳ್ಳುವಂತೆ ಸೂಚಿಸಿದರು.

ಅಧ್ಯಯನಕ್ಕೆ ಸೂಚನೆ
ಜಿಲ್ಲೆಯಲ್ಲಿ ಕಳೆದ ಬಾರಿ ಶೇ. 78.36 ಮತದಾನವಾಗಿದ್ದು, ಇದಕ್ಕಿಂತಲೂ ಕಡಿಮೆ ಮತದಾನವಾಗಿರುವ ಮತಗಟ್ಟೆಗಳ ವ್ಯಾಪ್ತಿಯಲ್ಲಿ ಸ್ವೀಪ್‌ ಸಮಿತಿಯ ಸದಸ್ಯರು ಅಧ್ಯಯನ ನಡೆಸಿ, ಕಡಿಮೆ ಮತದಾನವಾಗಿರುವುದಕ್ಕೆ ಕಾರಣಗಳು ಮತ್ತು ಈ ಬಾರಿ ಅಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ವರದಿ ನೀಡುವಂತೆ ಹಾಗೂ ಜಿಲ್ಲೆಯ ಎಲ್ಲ ನಗರಸ್ಥಳೀಯ ಸಂಸ್ಥೆಗಳು ಮತ್ತು ಗ್ರಾ.ಪಂ. ವ್ಯಾಪ್ತಿಯಲ್ಲಿರುವ ಸರಕಾರಿಮ ಖಾಸಗಿ ಜಾಹೀರಾತು ಫಲಕಗಳ ಸಮಗ್ರ ವಿವರಗಳನ್ನು ಸಂಗ್ರಹಿಸುವಂತೆ ಮತ್ತು ಚುನಾವಣೆ ಘೋಷಣೆಯಾದ 24 ಗಂಟೆಯ ಒಳಗೆ ಆ ಫಲಕಗಳಲ್ಲಿ ಸ್ವೀಪ್‌ ಕುರಿತು ಜಾಹೀರಾತು ಅಳವಡಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದರು.

Advertisement

1111 ಮತಗಟ್ಟೆಗಳಲ್ಲಿ ಮತದಾರರಿಗೆ ಅಗತ್ಯ ಮೂಲಸೌಕರ್ಯಗಳು ಇರುವ ಬಗ್ಗೆ ಪರಿಶೀಲನೆ ನಡೆಸಿ, ಸ್ವೀಪ್‌ ಕಾರ್ಯಕ್ರಮಗಳು ವಿನೂತನ ಮತ್ತು ಆಕರ್ಷಕವಾಗಿರಬೇಕು. ಯುವ ಜನರನ್ನು ಮತದಾನ ಪ್ರಕ್ರಿಯೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಭಾಗವಹಿಸುವಂತೆ ಮಾಡಬೇಕು. ಪ್ರಜಾಪ್ರಭುತ್ವ ದೊಡ್ಡ ಹಬ್ಬ ಚುನಾವಣೆಯನ್ನು ಸಂಭ್ರಮದಿಂದ ಆಚರಿಸಲು ಬೇಕಾದ ಕ್ರಮ ತೆಗೆದುಕೊಳ್ಳಬೇಕು. ಎಲ್ಲ ಇಲಾಖೆಯವರು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದರು.

ಜಿ.ಪಂ. ಉಪ ಕಾರ್ಯದರ್ಶಿ ಕಿರಣ್‌ ಪೆಡೆ°àಕರ್‌, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್‌, ಸ್ವೀಪ್‌ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಇದನ್ನೂ ಓದಿ: ಕಾಂಗ್ರೆಸ್ ನಲ್ಲಿ ಹತ್ತು ಜನ ಸಿಎಂ ರೇಸ್ ನಲ್ಲಿದ್ದು, ನಾನು ಕೂಡ ಒಬ್ಬ: ಡಾ. ಜಿ.ಪರಮೇಶ್ವರ್

Advertisement

Udayavani is now on Telegram. Click here to join our channel and stay updated with the latest news.

Next