Advertisement
ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಜಿಲ್ಲೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಜತೆಗೆ ಸಮಾಜಸೇವಕರು ಲಗ್ಗೆ ಇಟ್ಟಿದ್ದಾರೆ. ವಿವಿಧ ಪಕ್ಷಗಳ ಹಾಲಿ ಶಾಸಕರು ಮತ್ತೂಮ್ಮೆ ಕ್ಷೇತ್ರ ಉಳಿಸಿಕೊಳ್ಳುವ ಪ್ರಯತ್ನದಲ್ಲಿದ್ದರೆ, ಸಮಾಜ ಸೇವೆ ನೆಪದಲ್ಲಿ ವಿವಿಧ ಕ್ಷೇತ್ರಗಳ ಸಾಧಕರು ರಾಜಕೀಯ ರಂಗದಲ್ಲಿ ಅದೃಷ್ಟ ಪರೀಕ್ಷೆಗೆ ಸನ್ನದ್ಧರಾಗಿದ್ದಾರೆ.
Related Articles
Advertisement
ಗೌರಿಬಿದನೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಎನ್.ಎಚ್.ಶಿವಶಂಕರ ರೆಡ್ಡಿ ಶಾಸಕರಾಗಿದ್ದಾರೆ. ಮತ್ತೂಂದೆಡೆ ಸಮಾಜ ಸೇವೆ ಹೆಸರಿ ನಲ್ಲಿ ಎಂಟ್ರಿ ಕೊಟ್ಟಿರುವ ಕೆಹೆಚ್‌ಪಿ ಫೌಂಡೇಶನ್‌ನ ಪುಟ್ಟಸ್ವಾಮಿಗೌಡ ಮತ್ತು ಕೆಂಪರಾಜು ಕ್ಷೇತ್ರದಲ್ಲಿ ಸಂಚಲನ ಸೃಷ್ಟಿಸಿದ್ದಾರೆ. ಮತ್ತೂಂದೆಡೆ ಬಿಜೆಪಿಯಿಂದ ಒಂದು ಗುಂಪು ನಂದೀಶ್ ರೆಡ್ಡಿ ಅವರನ್ನು ಕರೆತರಲು ಪ್ರಯತ್ನ ಮಾಡುತ್ತಿದೆ.
ಚಿಂತಾಮಣಿ ವಿಧಾನಸಭಾ ಕ್ಷೇತ್ರ ದಲ್ಲಿ ಹಾಲಿ ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ಅವರು ಮತ್ತೂಮ್ಮೆ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಇವರ ಎದುರಾಳಿ ಮಾಜಿ ಶಾಸಕ ಡಾ| ಎಂ.ಸಿ. ಸುಧಾಕರ್ ಅವರನ್ನು ಕಾಂಗ್ರೆಸ್ ಪಕ್ಷದತ್ತ ಸೆಳೆಯಲು ಅನೇಕ ನಾಯಕರು ಪ್ರಯತ್ನ ಮಾಡುತ್ತಿದ್ದಾರೆ. ಇದಕ್ಕೆ ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಅವರ ವಿರೋಧವಿದೆ ಎನ್ನಲಾಗಿದೆ. ಇನ್ನೊಂದಡೆ ಗೋಪಾಲಕೃಷ್ಣ ಎಂಬವರು ಸಮಾಜಸೇವಾ ಕಾರ್ಯಗಳ ಮೂಲಕ ಕ್ಷೇತ್ರದಲ್ಲಿ ಗಮನ ಸೆಳೆದಿದ್ದಾರೆ.
ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಶಾಸಕ ಎಸ್.ಎಂ.ಸುಬ್ಟಾರೆಡ್ಡಿ ಅವರು ಚುನಾವಣೆಗೆ ಸಜ್ಜಾಗಿದ್ದು, ತಮ್ಮ ಅ ಧಿಕಾರದ ಅವ ಧಿಯಲ್ಲಿ ನಡೆದಿರುವ ಅಭಿವೃದ್ಧಿ ಕಾಮಗಾರಿಗಳ ಮೂಲಕ ಮತ್ತೂಮ್ಮೆ ಜನರ ವಿಶ್ವಾಸ ಗಿಟ್ಟಿಸಲು ಮುಂದಾಗಿದ್ದಾರೆ. ಮತ್ತೂಂದೆಡೆ ಜೆಡಿಎಸ್‌ನಿಂದ ನಾಗರಾಜ್ ರೆಡ್ಡಿ ಮತ್ತಿತರರು ತಮ್ಮ ಪ್ರಯತ್ನ ನಡೆಸಿದ್ದಾರೆ.
ಕಮಲ ಅರಳಿಸುವ ಪ್ರಯತ್ನಜಿಲ್ಲೆಯಲ್ಲಿ ಸಚಿವ ಡಾ| ಕೆ.ಸುಧಾಕರ್ ಕಮಲ ಅರಳಿಸುವ ಪ್ರಯತ್ನ ಮಾಡುತ್ತಿದ್ದರೆ, ಕಾಂಗ್ರೆಸ್‌ನ ಹಾಲಿ ಶಾಸಕರು ತಮ್ಮ ಕ್ಷೇತ್ರಗಳನ್ನು ಉಳಿಸಿಕೊಳ್ಳಲು ವಿಶೇಷ ಗಮನ ಹರಿಸಿದ್ದಾರೆ. ಈ ಮಧ್ಯೆ ಹೊಸಬರ ರಾಜಕೀಯ ಪ್ರವೇಶದಿಂದ ಜಿಲ್ಲೆಯಲ್ಲಿ ಸಂಚಲನ ಸೃಷ್ಟಿಸಿದ್ದು, ಮುಂದಿನ ಚುನಾವಣೆಯಲ್ಲಿ ಅವರ ಸ್ಪರ್ಧೆಯಿಂದ ರಾಜಕೀಯ ಚಿತ್ರಣ ಬದಲಾಗುತ್ತದಾ ಎಂಬುದನ್ನು ಕಾದು ನೋಡಬೇಕಿದೆ. – ಎಂ.ಎ.ತಮೀಮ್ ಪಾಷ