Advertisement
ಬುಧವಾರ ಸಂಜೆ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಅವರ ಸರ್ಕಾರಿ ನಿವಾಸ ಕಾವೇರಿಯಲ್ಲಿ ವಿಧಾನ ಪರಿಷತ್ ಸದಸ್ಯರೊಂದಿಗೆ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಪಕ್ಷ ರಾಜಕೀಯವಾಗಿ ತೀರ್ಮಾನ ತೆಗೆದುಕೊಂಡಿರುವುದರಿಂದ ಅದಕ್ಕೆ ಎಲ್ಲರೂ ಬದ್ಧರಾಗಿರಬೇಕು ಎಂದು ವಿಧಾನ ಪರಿಷತ್ ಸದಸ್ಯರಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
Related Articles
Advertisement
ಹೈಕಮಾಂಡ್ ಸೂಚನೆ: ಪ್ರತಾಪ್ ಚಂದ್ರ ಶೆಟ್ಟಿ ಅವರನ್ನು ಪದಚ್ಯುತಗೊಳಿಸಲು ಜೆಡಿಎಸ್ ಬೆಂಬಲ ಸೂಚಿಸಿದ್ದ ಬೆನ್ನಲ್ಲೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಪಕ್ಷದ ಹಿರಿಯ ಶಾಸಕ ಬಸವರಾಜ್ ಹೊರಟ್ಟಿ ಅವರನ್ನು ಸಭಾಪತಿ ಮಾಡಲು ಬೆಂಬಲ ನೀಡುವಂತೆ ಮನವಿ ಮಾಡಿದ್ದರು ಎಂದು ಹೇಳಲಾಗಿತ್ತು. ದೇವೇಗೌಡರ ಮನವಿ ಹಿನ್ನೆಲೆಯಲ್ಲಿ ಕೇಂದ್ರದ ಬಿಜೆಪಿ ನಾಯಕರು ಜೆಡಿಎಸ್‌ಗೆ ಸಭಾಪತಿ ಸ್ಥಾನ ಬಿಟ್ಟುಕೊಡಲು ರಾಜ್ಯ ಬಿಜೆಪಿ ನಾಯಕರಿಗೆ ಸೂಚನೆ ನೀಡಿದ್ದರು ಎಂದು ತಿಳಿದು ಬಂದಿದೆ. ಪಕ್ಷದ ಹೈಕಮಾಂಡ್ ಸೂಚನೆ ಮೇರೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಜೆಡಿಎಸ್‌ಗೆ ಸಭಾಪತಿ ಸ್ಥಾನ ಬಿಟ್ಟುಕೊಡಲು ತೀರ್ಮಾನಿಸಲಾಗಿದ್ದು, ಉಪ ಸಭಾಪತಿ ಸ್ಥಾನಕ್ಕೆ ಎಂ.ಕೆ. ಪ್ರಾಣೇಶ್‌ಗೆ ನಾಮಪತ್ರ ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ:ರಾಜ್ಯದ ಒಂದಿಂಚು ಜಾಗವನ್ನೂ ಬಿಡೆವು, ನಮ್ಮನ್ನು ಕೆಣಕಿದರೆ ಪರಿಣಾಮ ನೆಟ್ಟಗಿರಲ್ಲ :ನಾರಾಯಣಗೌಡ ಹೊರಟ್ಟಿ ಮನವಿ:
ಸಭಾಪತಿ ಸ್ಥಾನದ ಆಕಾಂಕ್ಷಿಯಾಗಿರುವ ಜೆಡಿಎಸ್‌ನ ಹಿರಿಯ ಸದಸ್ಯ ಬಸವರಾಜ್ ಹೊರಟ್ಟಿ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡರ ಸೂಚನೆ ಮೇರೆಗೆ ಬುಧವಾರ ಬೆಳಿಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಸಭಾಪತಿ ಸ್ಥಾನಕ್ಕೆ ಜೆಡಿಎಸ್‌ಗೆ ಬೆಂಬಲಿಸುವಂತೆ ಮನವಿ ಮಾಡಿದ್ದರು. ಅಲ್ಲದೇ ಶುಕ್ರವಾರ ನಡೆಯುವ ಉಪ ಸಭಾಪತಿ ಸ್ಥಾನಕ್ಕೆ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಬಿಜೆಪಿಗೆ ಬೆಂಬಲ ಸೂಚಿಸುವುದಾಗಿ ತಿಳಿಸಿದ್ದರು. ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಬಸವರಾಜ್ ಹೊರಟ್ಟಿ, ಜೆಡಿಎಸ್‌ಗೆ ಸಭಾಪತಿ ಸ್ಥಾನ ಬಿಟ್ಟು ಕೊಡುವಂತೆ ಮನವಿ ಮಾಡಿದ್ದೇವೆ. ಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿ¨ªಾರೆ. ಉಪ ಸಭಾಪತಿ ಸ್ಥಾನ ಬಿಜೆಪಿಗೆ ಬಿಟ್ಟು ಕೊಡಲಿದ್ದೇವೆ. ಜನವರಿ 29 ರಂದು ಉಪ ಸಭಾಪತಿ ಚುನಾವಣೆ ನಡೆಯಲಿದೆ. ಉಪ ಸಭಾಪತಿ ಚುನಾವಣೆ ನಂತರ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಅವರು ಉಪ ಸಭಾಪತಿ ಅವರಿಗೆ ರಾಜೀನಾಮೆ ನೀಡಬಹುದು. ಅವರು ರಾಜೀನಾಮೆ ನೀಡಿದರೆ, ರಾಜ್ಯಪಾಲರು ಸಭಾಪತಿ ಚುನಾವಣೆಗೆ ದಿನ ನಿಗದಿ ಮಾಡಬೇಕಾಗುತ್ತದೆ. ಅವರು ಇದೇ ಅಧಿವೇಶನದಲ್ಲಿ ಸಭಾಪತಿ ಚುನಾವಣೆಗೆ ದಿನ ನಿಗದಿ ಮಾಡಿದರೆ ಸಭಾಪತಿಯಾಗಿ ಆಯ್ಕೆ ಆಗುತ್ತೇನೆ. ಇಲ್ಲದಿದ್ದರೆ ಮುಂದಿನ ಅಧಿವೇಶನದಲ್ಲಿ ಸಭಾಪತಿ ಆಯ್ಕೆ ಆಗಬಹುದು ಎಂದು ಹೇಳಿದರು.