Advertisement
ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯಪಾಲರು ಪರಿಶೀಲಿಸಿ ತನಿಖೆಗೆ ಅನುಮತಿ ನೀಡಿದ್ದಾರೆ. 75 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಹೀಗೆ ನಡೆದಿದೆ ಎಂಬಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವರ್ತಿಸುತ್ತಿದ್ದಾರೆ. ಈ ಹಿಂದೆ ಬಿ.ಎಸ್. ಯಡಿಯೂರಪ್ಪ, ಜನಾರ್ದನ ರೆಡ್ಡಿ ವಿರುದ್ಧದ ತನಿಖೆಗೂ ಆಗಿನ ರಾಜ್ಯಪಾಲರು ಅನುಮತಿ ನೀಡಿದ್ದರು. ಆಗ ರಾಜಭವನ ಕಾಂಗ್ರೆಸ್ ಕಚೇರಿಯಾಗಿತ್ತೇ? ಕಾಂಗ್ರೆಸ್ ನಾಯಕರು ಕಿವಿಯ ಮೇಲೆ ಹೂ ಇಡುವುದನ್ನು ಬಿಟ್ಟು, ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಲಿ ಎಂದು ಸವಾಲು ಹಾಕಿದರು.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಅಭ್ಯರ್ಥಿಯನ್ನು ಪಕ್ಷದ ವರಿಷ್ಠರು ನಿರ್ಧರಿಸುತ್ತಾರೆ. ಟಿಕೆಟ್ ಕೊಡಿಸುವುದಾಗಲಿ, ತಪ್ಪಿಸುವುದಾಗಲಿ ನನ್ನ ಕೈಯಲ್ಲಿಲ್ಲ. ವರಿಷ್ಠರ ಮಾತೆಂದರೆ ನಮಗೆ ತಾಯಿ ಮಾತಿದ್ದಂತೆ ಎಂದು ಅಶೋಕ್ ತಿಳಿಸಿದರು. ಕಾಂಗ್ರೆಸನ್ನು ಸೋಲಿಸುವುದು ನಮ್ಮ ಗುರಿ. ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತೇವೆ ಎಂದರು.