Advertisement

ವಿಧಾನಪರಿಷತ್ ಚುನಾವಣೆ : ಸೇಡು ತೀರಿಸಿಕೊಳ್ಳಲು ಜೆಡಿಎಸ್‌ ತವಕ

06:11 PM Dec 04, 2021 | Team Udayavani |

ದೇವನಹಳ್ಳಿ: ಬೆಂ. ಗ್ರಾಮಾಂತರ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿಗೆ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್‌ ಜೆಡಿಎಸ್‌ ಅಭ್ಯರ್ಥಿಗಳ ನಡುವೆ ಜಿದ್ದಾಜಿದ್ದಿನ
ಹೋರಾಟ ನಡೆಯುತ್ತಿದೆ. ವಿಧಾನಪರಿಷತ್‌ ಚುನಾವಣೆ ದಿನೇದಿನೇ ಕಾವೇರುತ್ತಿದ್ದು ಚುನಾವಣೆಯಲ್ಲಿ ಗೆಲುವಿನ ಮಾಲೆ ಯಾರಿಗೆ ಮತದಾರರು ಕೈಹಿಡಿಯುತ್ತಾರೆ ಎಂಬ ಕುತೂಹಲ ರಾಮನಗರ ಜಿಲ್ಲೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

Advertisement

ಬೆಂ. ಗ್ರಾಮಾಂತರ ಜಿಲ್ಲೆ ಮತ್ತು ರಾಮನಗರ ಜಿಲ್ಲೆಯನ್ನು ಒಳಗೊಂಡು ಎಂಟು ವಿದಾನಸಭಾ ಕ್ಷೇತ್ರವನ್ನು ಹೊಂದಿದೆ. ಅದರಲ್ಲಿ ಜೆಡಿಎಸ್‌ ಶಾಸಕರು ಐದು ಜನ ಹಾಗೂ ಮೂರು ಕಾಂಗ್ರೆಸ್‌ ಶಾಸಕರನ್ನು ಹೊಂದಿದೆ. ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರೇ ಅಭ್ಯರ್ಥಿಗಳು ಎಂಬ ರೀತಿಯಲ್ಲಿ ಚಿತ್ರಣ ಕಾಣಿಸಿದ್ದು
ಜಿದ್ದಾಜಿದ್ದಿನ ಪೈಪೋಟಿ ನಡೆಯುತ್ತಿದೆ. ಇಬ್ಬರು ನಾಯಕರಿಗೆ ಇದೊಂದು ಪ್ರತಿಷ್ಠೆಯ ಕಣವಾಗಿದೆ. 3,328 ಮತದಾರರನ್ನು ಈ ಕ್ಷೇತ್ರ ಹೊಂದಿದೆ. ಈ ಭಾರಿ ಕಾಂಗ್ರೆಸ್ಸಿನಿಂದ ಹಾಲಿ ವಿಧಾನ ಪರಿಷತ್‌ ಸದಸ್ಯ ಎಸ್‌. ರವಿ ಮತ್ತೆ ಕಣದಲ್ಲಿದ್ದಾರೆ. ಜೆಡಿಎಸ್‌ ಅಭ್ಯರ್ಥಿ ರಮೇಶ್‌ ಗೌಡ ಹಾಗೂ ಬಿಜೆಪಿ ಅಭ್ಯರ್ಥಿ ಬಿ.ಸಿ.ನಾರಾಯಣಸ್ವಾಮಿ ಕಣದಲ್ಲಿದ್ದಾರೆ. ಮತದಾನಕ್ಕೆ ಇನ್ನೂ ಕೆಲವೇ
ಬಾಕಿ ಇರುವಾಗಲೇ ಕಾಂಗ್ರೆಸ್‌ ನ ಅಭ್ಯರ್ಥಿ ಎಸ್‌.ರವಿ, ಜೆಡಿಎಸ್‌ ಅಭ್ಯರ್ಥಿ ರಮೇಶ್‌ಗೌಡ, ಬಿಜೆಪಿ ಅಭ್ಯರ್ಥಿ ಬಿ.ಸಿ.ನಾರಾಯಣಸ್ವಾಮಿ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಚಾರಗಳನ್ನು ಮಾಡುವುದರ ಮೂಲಕ ಓಡಾಡುತ್ತಿದ್ದಾರೆ.

ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲು 2 ಜಿಲ್ಲೆಯ ಉಸ್ತುವಾರಿ ಸಚಿವರು ಪಕ್ಷಕ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರಲು ಶ್ರಮಿಸುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯಸರ್ಕಾರದ ಸಾಧನೆಗಳನ್ನು ಬಿಜೆಪಿ ಪಕ್ಷದ ಅಭ್ಯರ್ಥಿಗಳು ತಿಳಿಸಿ ಪ್ರಚಾರ ಮಾಡುತ್ತಿದ್ದಾರೆ. ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳಿಗೆ ಸರಿಸಮಾನವಾಗಿ ಪೈಪೋಟಿ ನೀಡಲು ಬಿಜೆಪಿ ಗ್ರಾಪಂ ಚುನಾವಣಾ
ಕಾರ್ಯತಂತ್ರವನ್ನು ತೀವ್ರಗೊಳಿಸಿ ಗೆಲುವಿಗೆ ಶತಪ್ರಯತ್ನ ಮಾಡುತ್ತಿದೆ. ವಿಧಾನ ಪರಿಷತ್‌ ಚುನಾವಣೆಯಲ್ಲಿ ಜೆಡಿಎಸ್‌ ಬಿಜೆಪಿ ಹೊಂದಾಣಿಕೆ ಮಾಡಿಕೊಂಡಿವೆ ಎಂಬ ಸುದ್ದಿಗಳು ಚರ್ಚೆಗೆ ಗ್ರಾಸವಾಗುತ್ತಿರುವುದರ ನಡುವೆಯೂ ಬಿಜೆಪಿ ಅಭ್ಯರ್ಥಿ ಬಿ.ಸಿ.ನಾರಾಯಣ ಸ್ವಾಮಿ ಪ್ರಚಾರದಲ್ಲಿ ತೊಡಗಿ ಸಭೆಗಳು ಮತ್ತು ಎಲ್ಲಾ ತಾಲೂಕುಗಳ ಮುಖಂಡರು ಮತ್ತು ಗ್ರಾಪಂ ಸದಸ್ಯರು,
ಪುರಸಭೆ, ನಗರಸಭೆ ಸದಸ್ಯರನ್ನೂ ಸಹ ಸಂಪರ್ಕಿಸಿ ಮತನೀಡುವಂತೆ ಮನವಿ ಮಾಡುತ್ತಿದ್ದಾರೆ. ಜೆಡಿಎಸ್‌, ಕಾಂಗ್ರೆಸ್‌ ತೀವ್ರ ಪೈಪೋಟಿ ನಡೆಯುತ್ತಿದೆ. ಈ ಚುನಾವಣೆಯಲ್ಲಿ ಶಾಸಕರ ಪರೀಕ್ಷೆಯೂ ಆಗಲಿದೆ. ಪಕ್ಷೇತರ ಶಾಸಕರಾಗಿರುವ ಹೊಸಕೋಟೆಯ ಶರತ್‌ ಬಚ್ಚೇಗೌಡ ಕಾಂಗ್ರೆಸ್ಸಿಗೆ ಬೆಂಬಲ ನೀಡಿದ್ದಾರೆ. ಅದೇ ಹೊಸಕೋಟೆ ಕ್ಷೇತ್ರದಲ್ಲಿ ಬಿಜೆಪಿ ಪ್ರತಿನಿಧಿಸುವ ಜಿಲ್ಲಾ ಉಸ್ತುವಾರಿ ಸಚಿವ ಎಂಟಿಬಿ ನಾಗರಾಜ್‌ ಇದ್ದಾರೆ. ಹೀಗಾಗಿ ಎಂಟು ವಿಧಾನಸಭಾ ಕ್ಷೇತ್ರದಲ್ಲಿ ಅಗ್ನಿಪರೀಕ್ಷೆ ಯಾಗಿದೆ.

ಇದನ್ನೂ ಓದಿ : ಕರಾವಳಿ ಸ್ಪೆಷಲ್; ರುಚಿಕರವಾದ ಸಿಗಡಿ ಬಿರಿಯಾನಿ ಮನೆಯಲ್ಲೇ ಸಿದ್ಧ ಪಡಿಸಿ

ಕಳೆದ ಬಾರಿ ಎಸ್‌.ರವಿ ವಿರುದ್ಧ ಜೆಡಿಎಸ್‌ ಅಭ್ಯರ್ಥಿ ಇ.ಕೃಷ್ಣಪ್ಪ ಸೋಲುಂಡಿದ್ದರು. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರೇ ಚುನಾವಣೆಯ ಸಾರಥ್ಯವನ್ನು ವಹಿಸಿಕೊಂಡಿದ್ದಾರೆ. ಬೆಂ. ಗ್ರಾಮಾಂತರ ಮತ್ತು ರಾಮನಗರದಲ್ಲಿ ಸಾಲುಸಾಲು ಚುನಾವಣೆಗಳಲ್ಲಿ ಸೋಲು ಜೆಡಿಎಸ್ಸಿಗೆ ಮುಖಭಂಗಕ್ಕೆ ಕಾರಣವಾಗಿದೆ. ಸೋಲಿನ ಸೇಡು ತೀರಿಸಿಕೊಳ್ಳಲು ಜೆಡಿಎಸ್‌ ಶಕ್ತಿ
ತೋರಿಸಲು ವಿಧಾನಪರಿಷತ್‌ ಚುನಾವಣೆಯನ್ನು ವರಿಷ್ಠರು ಸವಾಲಾಗಿ ಸ್ವೀಕಾರ ಮಾಡಿದ್ದಾರೆ. ಪಕ್ಷದ ನಾಯಕರನ್ನು ನೆಚ್ಚಿಕೊಂಡು ಜೆಡಿಎಸ್‌ ಅಭ್ಯರ್ಥಿ ರಮೇಶ್‌ಗೌಡ ಗೆಲ್ಲುವ ಪ್ರಯತ್ನ ನಡೆಸಿದ್ದಾರೆ. ಜೆಡಿಎಸ್‌ ಮತಬ್ಯಾಂಕಿಗೆ ಲಗ್ಗೆಹಾಕಿರುವ ಕಾಂಗ್ರೆಸ್‌ ಪಕ್ಷದ ಬೆಂಬಲಿತ ಮತದಾರರನ್ನು ಸೆಳೆಯುವ ಪ್ರಯತ್ನ ಪಾರಂಭಿಸಿದ್ದಾರೆ.

Advertisement

ನಾಯಕರ ಪ್ರಚಾರ ಭರಾಟೆ
ಈಗಾಗಲೇ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅಭ್ಯರ್ಥಿ ನಾಮಪತ್ರ ಹಾಕುವ ವೇಳೆ ಹಾಗೂ ಕೆಲವು ಕಡೆ ಪ್ರಚಾರ ಸಭೆಗಳಲ್ಲಿ ಹಾಗೂ ಸ್ಥಳೀಯ ಶಾಸಕರುಗಳು ಮುಖಂಡರು ಪಾಲ್ಗೊಂಡಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿಯ ಪರವಾಗಿ ಸಂಸದ ಡಿ.ಕೆ. ಸುರೇಶ್‌, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಮಾಜಿ ಸಚಿವ ಕೃಷ್ಣಬೈರೇಗೌಡ ಸೇರಿದಂತೆ ಕಾಂಗ್ರೆಸ್‌ ಮುಖಂಡರು ಒಗ್ಗಟ್ಟಿನಿಂದ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಸುವಾಗ ಸಚಿವರಾದ ಅಶ್ವತ್ಥ ನಾರಾಯಣ್‌, ಎಂಟಿಬಿ ನಾಗರಾಜ್‌ ಬಂದಿದ್ದರು. ಚುನಾವಣೆ
ಸಾರಥ್ಯ ವಹಿಸಬೇಕಾಗಿದ್ದ ಸಚಿವರಾದ ಎಂಟಿಬಿ ನಾಗರಾಜ್‌ ಹಾಗೂ ಅಶ್ವಥನಾರಾಯಣ್‌, ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಅಖಾಡದಲ್ಲಿ ಕಾಣಿಸುತ್ತಿಲ್ಲ. ಆದರೂ ಬಿಜೆಪಿ ಅಭ್ಯರ್ಥಿ ಸ್ಥಳೀಯ ನಾಯಕರೊಂದಿಗೆ ಪ್ರಚಾರದಲ್ಲಿ ತೊಡಗಿ ಕಮಲ ಅರಳಿಸಲು ಪ್ರಯತ್ನ ಮಾಡುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next