Advertisement

ಹೈಸ್ಕೂಲ್‌ ಹೆಮ್ಮಕ್ಕಳಿಗೂ ಸಿಗಲಿದೆ ವಿದ್ಯಾನಿಧಿ; ಶೀಘ್ರವೇ ಬರಲಿದೆ ಆದೇಶ

02:15 AM Dec 23, 2021 | Team Udayavani |

ಬೆಳಗಾವಿ: ರೈತರ ಮಕ್ಕಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಜಾರಿಗೊಳಿಸಿರುವ ವಿದ್ಯಾನಿಧಿ ಯೋಜನೆಯ ವಾರ್ಷಿಕ ಶಿಷ್ಯವೇತನ ಇನ್ನು ಹೈಸ್ಕೂಲ್‌ ವಿದ್ಯಾರ್ಥಿನಿಯರಿಗೂ ದೊರೆಯಲಿದೆ.

Advertisement

ಹೆಣ್ಣು ಮಕ್ಕಳು ಶಾಲೆಯಿಂದ ಹೊರಗುಳಿಯುವ ಪ್ರಮಾಣವನ್ನು ತಪ್ಪಿಸಲು ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಒಲವು ತೋರಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕೃಷಿಕರ ಮಕ್ಕಳು ಉನ್ನತ ಶಿಕ್ಷಣ ಪಡೆಯುವಂತಾಗಲು “ವಿದ್ಯಾನಿಧಿ’ ಭಾಗ್ಯ 8, 9 ಮತ್ತು 10ನೇ ತರಗತಿ ಓದುತ್ತಿರುವ ವಿದ್ಯಾರ್ಥಿ ನಿಯರಿಗೂ ಲಭಿಸಲಿದೆ.

ಏನಿದು ಯೋಜನೆ: ಯೋಜನೆಯನ್ನು 2021-22ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ಈಗಾಗಲೇ ಜಾರಿಗೊಳಿಸಿದ್ದು, ಈವರೆಗೆ 2,03,438 ವಿದ್ಯಾರ್ಥಿಗಳಿಗೆ 55.80 ಕೋಟಿ ರೂ.ಗಳನ್ನು ನೇರ ನಗದು ವರ್ಗಾವಣೆ ವ್ಯವಸ್ಥೆಯಡಿ ವರ್ಗಾಯಿಸಲಾಗಿದೆ.

ಪಿಯುಸಿ, ಐಟಿಐ, ಡಿಪ್ಲೊಮಾ ವಿದ್ಯಾರ್ಥಿಗಳಿಗೆ 2,500 ರೂ., ವಿದ್ಯಾರ್ಥಿನಿಯರಿಗೆ 3 ಸಾವಿರ ರೂ., ಬಿಎ, ಬಿಎಸ್ಸಿ, ಬಿಕಾಂ ಇತರ ಪದವಿ ಕೋರ್ಸ್‌ಗೆ 5,000 ರೂ, ವಿದ್ಯಾರ್ಥಿನಿಯರಿಗೆ 5,500 ರೂ., ಎಲ್‌ಎಲ್‌ಬಿ, ಪ್ಯಾರಾಮೆಡಿಕಲ್‌, ಬಿ.ಫಾರ್ಮ್, ನರ್ಸಿಂಗ್‌ ಇತರ ವೃತ್ತಿ ಪರ ಕೋರ್ಸ್‌ ವಿದ್ಯಾರ್ಥಿಗಳಿಗೆ 10 ಸಾವಿರ ರೂ., ವಿದ್ಯಾರ್ಥಿನಿಯರಿಗೆ 11,000 ರೂ. ನಿಗದಿಪಡಿಸಲಾಗಿದೆ.

Advertisement

ಇದನ್ನೂ ಓದಿ:“ಪ್ರಳಯ್‌’ ಪರೀಕ್ಷೆ ಯಶಸ್ವಿ : ಪಯಣದ ಮಧ್ಯೆಯೇ ಪಥ ಬದಲಿಸುವ ಹೊಸ ತಲೆಮಾರಿನ ಕ್ಷಿಪಣಿ

ಹೈಸ್ಕೂಲ್‌ ಹಂತಕ್ಕೆ ವಿಸ್ತರಿಸುವ ಪ್ರಸ್ತಾವನೆಯನ್ನು ಕೃಷಿ ಇಲಾಖೆ ಸಿದ್ಧಪಡಿಸಿ ಮುಖ್ಯಮಂತ್ರಿಗಳಿಗೆ ಸಲ್ಲಿಕೆ ಮಾಡಲಾಗಿದೆ. ಒಂದೆರಡು ದಿನದಲ್ಲೇ ಈ ಕುರಿತು ಆದೇಶ ಹೊರಬೀಳಲಿದೆ ಎಂದು ತಿಳಿದುಬಂದಿದೆ.

ಮುಖ್ಯಮಂತ್ರಿಗಳ ಸೂಚನೆ ಹಾಗೂ ಒಪ್ಪಿಗೆ ಹಿನ್ನೆಲೆಯಲ್ಲಿ ವಿದ್ಯಾನಿಧಿ ಸೌಲಭ್ಯವನ್ನು 8, 9 ಮತ್ತು 10ನೇ ತರಗತಿ ವಿದ್ಯಾರ್ಥಿನಿಯರಿಗೆ ಜಾರಿಗೊಳಿಸಲು ಸಿದ್ಧತೆ ನಡೆಸಲಾಗಿದೆ. ಸದ್ಯದಲ್ಲೇ ಆದೇಶ ಹೊರಬೀಳಲಿದೆ.
– ಬಿ.ಸಿ. ಪಾಟೀಲ್‌, ಕೃಷಿ ಸಚಿವ

Advertisement

Udayavani is now on Telegram. Click here to join our channel and stay updated with the latest news.

Next