Advertisement

“ವಿದ್ಯಾಮಿತ್ರ’ಡಿಜಿ ಲರ್ನ್ ಸ್ಮಾರ್ಟ್‌ ಕ್ಲಾಸ್‌ ಆ್ಯಪ್‌ ಬಿಡುಗಡೆ

11:08 AM May 24, 2020 | sudhir |

ಮಂಗಳೂರು: ಮಂಗಳೂರು ಉತ್ತರ ಕ್ಷೇತ್ರ ವ್ಯಾಪ್ತಿಯ 15 ಸರಕಾರಿ ಪ್ರೌಢಶಾಲೆಗಳ ವಿದ್ಯಾರ್ಥಿಗಳ ಅಧ್ಯಯನಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಶಾಸಕ ಡಾ| ಭರತ್‌ ಶೆಟ್ಟಿ ಮತ್ತು ಬೆಂಗಳೂರು ಪಶ್ಚಿಮ ರೋಟರಿ ಕ್ಲಬ್‌ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗಿರುವ “ವಿದ್ಯಾ ಮಿತ್ರ’ ಡಿಜಿ ಲರ್ನ್ ಸ್ಮಾರ್ಟ್‌ ಕ್ಲಾಸ್‌ ಆ್ಯಪ್‌ನ ಬಿಡುಗಡೆ ಸಮಾರಂಭ ನಗರದ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಶನಿವಾರ ಜರಗಿತು.

Advertisement

ವೀಡಿಯೋ ಕಾನ್ಫರೆನ್ಸ್‌ ಮೂಲಕ ಆ್ಯಪ್‌ ಅನಾವರಣಗೊಳಿಸಿದ ಬಿಜೆಪಿ ರಾಷ್ಟ್ರೀಯ ಸಂಘಟನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಮಾತನಾಡಿ, ಖಾಸಗಿ ಶಾಲೆಗಳ ಸ್ಪರ್ಧೆಯ ನಡುವೆ ಸರಕಾರಿ ಶಾಲೆಗಳ ಮಕ್ಕಳ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿ ಸುವ ಶಾಸಕರ ಈ ಪ್ರಯತ್ನ ಶ್ಲಾಘ ನೀಯ. ಸರಕಾರಿ ಶಾಲೆಯ ಎಲ್ಲ ಮಕ್ಕಳಿಗೂ ಈ ವ್ಯವಸ್ಥೆಯ ಲಾಭ ದೊರೆಯುವಂತಾಗಲಿ ಎಂದರು.

ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ರಾಜ್ಯದಲ್ಲಿ ಸುಮಾರು 48 ಸಾವಿರ ಸರಕಾರಿ ಶಾಲೆಗಳಿದ್ದು, ಕೋಟಿಗೂ ಮಿಕ್ಕಿ ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ. ಈ ಎಲ್ಲ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ಸರಕಾರದ ಜವಾಬ್ದಾರಿ. ಈ ನಿಟ್ಟಿನಲ್ಲಿ ಶಾಸಕ ಡಾ| ಭರತ್‌ ಶೆಟ್ಟಿ ಅವರು ಹೊಸ ಪ್ರಯತ್ನಕ್ಕೆ ಕೈ ಹಾಕಿದ್ದಾರೆ ಎಂದರು.

ಸಂಸದ ನಳಿನ್‌ ಕುಮಾರ್‌ ಕಟೀಲು ಅಧ್ಯಕ್ಷತೆ ವಹಿಸಿ ಡಿಜಿ ಲರ್ನ್ ಸ್ಮಾರ್ಟ್‌ ಕ್ಲಾಸ್‌ನ ಉಪಕರಣಗಳನ್ನು ಸಾಂಕೇತಿಕವಾಗಿ ಶಾಲಾ ಮುಖ್ಯಸ್ಥರಿಗೆ ಹಸ್ತಾಂತರಿಸಿದರು. ಮೇಯರ್‌ ದಿವಾಕರ್‌ ಪಾಂಡೇಶ್ವರ್‌, ಉಪ ಮೇಯರ್‌ ವೇದಾವತಿ, ಜಿ.ಪಂ. ಸದಸ್ಯ ಜನಾರ್ದನ ಗೌಡ, ಕಾರ್ಪೊರೇಟರ್‌ಗಳು ಪಾಲ್ಗೊಂಡಿದ್ದರು.

ಶಾಸಕ ಡಾ| ಭರತ್‌ ಶೆಟ್ಟಿ ಪ್ರಾಸ್ತಾವಿಸಿ ಸ್ವಾಗತಿಸಿದರು. ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಧ್ಯಕ್ಷ ತಿಲಕ್‌ರಾಜ್‌ ಕೃಷ್ಣಾಪುರ ವಂದಿಸಿದರು. ಪಿ.ಬಿ. ಹರೀಶ್‌ ರೈ ಕಾರ್ಯಕ್ರಮ ನಿರ್ವಹಿಸಿದರು.

Advertisement

ಇಂದಿನ ವಿದ್ಯಾರ್ಥಿಗಳು ಮೊಬೈಲ್‌, ಕಂಪ್ಯೂಟರ್‌, ಅಂತರ್ಜಾಲದಲ್ಲಿ ಪರಿಣಿತರಾಗುತ್ತಿದ್ದಾರೆ. ಸರಕಾರಿ ಶಾಲಾ ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕವಾಗಿ ತಯಾರುಗೊಳಿಸಲು ಇಂತಹ ಶಿಕ್ಷಣ ವ್ಯವಸ್ಥೆ ಒದಗಿಸುವ ಯೋಚನೆ ಈ ಹಿಂದೆಯೇ ಇತ್ತು. ಈಗ ಸಾಕಾರಗೊಂಡಿದೆ.
– ಡಾ| ವೈ.ಭರತ್‌ ಶೆಟ್ಟಿ, ಶಾಸಕರು

Advertisement

Udayavani is now on Telegram. Click here to join our channel and stay updated with the latest news.

Next