Advertisement

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

06:39 PM Mar 29, 2024 | Team Udayavani |

ಅರುಣ್‌ ಅಮುಕ್ತ ನಿರ್ದೇಶನದಲ್ಲಿ ಮೂಡಿ ಬಂದಿರುವ “ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ. ಕೆಲವು ದಿನಗಳ ಹಿಂದಷ್ಟೇ “ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಸಿನಿಮಾದ ಮೋಷನ್‌ ಪೋಸ್ಟರ್‌ ಮೂಲಕ ಚಿತ್ರತಂಡ ಸಿನಿಮಾದ ಕೆಲ ಪಾತ್ರಗಳ ದರ್ಶನ ಮಾಡಿಸಿತ್ತು.

Advertisement

ಚಿತ್ರದಲ್ಲಿ ಚಂದನ್‌ ಶೆಟ್ಟಿ, ಭಾವನಾ ಅಪ್ಪು, ಅಮರ್‌, ಮನಸ್ವಿ, ವಿವಾನ್‌, ಸುನಿಲ್‌ ಪುರಾಣಿಕ್‌, ಅರವಿಂದ ರಾಜ್‌ ಪ್ರಶಾಂತ್‌ ಸಂಬರ್ಗಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಮಾನಸಿ, ಭವ್ಯ, ಅರವಿಂದ ರಾವ್‌, ಸಿಂಚನಾ, ರಘು ರಾಮನಕೊಪ್ಪ, ಕಾಕ್ರೋಚ್‌ ಸುಧಿ ಮುಂತಾದವರು ಇತರ ಪಾತ್ರಗಳಲ್ಲಿ ನಟಿಸಿದ್ದಾ.

ಇದೊಂದು ಟೀನೇಜ್‌ ಕಲ್ಟ್ ಸಿನಿಮಾ ಎಂಬುದನ್ನು ಚಿತ್ರತಂಡ ಹೇಳಿಕೊಂಡಿದೆ. ನಿರ್ದೇಶಕ ಅರುಣ್‌ ಅಮುಕ್ತ ಪಕ್ಕಾ ಪ್ಲಾನ್‌ ಮಾಡಿಕೊಂಡು, ಅಂದುಕೊಂಡಂತೆಯೇ ಚಿತ್ರೀಕರಣ ಮುಗಿಸಿಕೊಂಡಿ ¨ªಾರೆ. ಐವತ್ತು ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ ಎಂದು ಕಾರ್ಯಕಾರಿ ನಿರ್ಮಾಪಕ ಶ್ರೀಕಾಂತ್‌ ಜಿ ಕಶ್ಯಪ್‌ ಮಾಹಿತಿ ನೀಡಿದರು. ವಿದ್ಯಾರ್ಥಿ ವಿದ್ಯಾರ್ಥಿ ನಿಯರೇ ಚಿತ್ರದಲ್ಲಿ ಚಂದನ್‌ ಶೆಟ್ಟಿ ಅವರದ್ದು ಭಿನ್ನ ಶೇಡ್‌ ಗಳನ್ನು ಹೊಂದಿರುವ ಪಾತ್ರವಂತೆ. ಅವರ ಪಾತ್ರಕ್ಕೆ ಮೂರು ಆಯಾಮಗಳಿವೆ. ಆ ಮೂರೂ ಪಾತ್ರಗಳಿಗಾಗಿ ಅವರು ತಿಂಗಳುಗಟ್ಟಲೆ ಶ್ರಮವಹಿಸಿ ತಯಾರಿ ನಡೆಸಿದ್ದಾ. ಆ ಮೂರೂ ಶೇಡ್‌ಗಳು ಒಂದಕ್ಕೊಂದು ತದ್ವಿರುದ್ಧವಾಗಿವೆ ಯಂತೆ. ಚಂದನ್‌ ಅಸಲೀ ವ್ಯಕ್ತಿತ್ವಕ್ಕೆ ವಿರುದ್ಧವಾಗಿರೋ ಆ ಪಾತ್ರಗಳನ್ನು ನಿಭಾಯಿಸೋದು ಸವಾಲಾಗಿತ್ತಂತೆ. ಸುಬ್ರಮಣ್ಯ ಕುಕ್ಕೆ ಮತ್ತು ಶಿವಲಿಂಗೇಗೌಡ “ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next