Advertisement
ಗ್ರಾಮೀಣ ಜನರ ಸಮಸ್ಯೆಗಳಿಗೆ ಸ್ಪಂದಿಸಿ ತಕ್ಷಣ ಪರಿಹಾರ ಕಲ್ಪಿಸುವುದಕ್ಕಾಗಿ ರಾಜ್ಯ ಸರಕಾರ ಜಾರಿಗೆ ತರುತ್ತಿರುವ ಮಹತ್ವಾಕಾಂಕ್ಷೆಯ ಜನಸ್ನೇಹಿ ಯೋಜನೆಗಳಲ್ಲಿ ಇದು ಒಂದಾಗಿದೆ. ಆಯಾ ತಾಲೂಕು ವ್ಯಾಪ್ತಿಯ ಕಾರ್ಯಪಾಲಕ ಎಂಜಿನಿಯರ್ ಗಳು ಹಾಗೂ ಅಧಿಕಾರಿಗಳು ಖುದ್ದು ಭಾಗವಹಿಸಿ ಜನರ ಸಮಸ್ಯೆಗಳನ್ನು ಆಲಿಸಲಿದ್ದಾರೆ.
ಸರಕಾರಿ ಯೋಜನೆಗಳು ಜನರಿಗೆ ತ್ವರಿತವಾಗಿ ತಲುಪಬೇಕು ಹಾಗೂ ಜನರ ಸಮಸ್ಯೆಗಳಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕೆಂಬ ಉದ್ದೇಶದಿಂದ ಎಲ್ಲ ಇಲಾಖೆಗಳಲ್ಲೂ ಜನಸ್ನೇಹಿ ಕಾರ್ಯಕ್ರಮಗಳ ಜಾರಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಳೆದ ಎರಡು ತಿಂಗಳ ಅವಧಿಯಲ್ಲಿ ಇಂಧನ ಇಲಾಖೆ ಅನುಷ್ಠಾನಗೊಳಿಸುತ್ತಿರುವ ಎರಡನೇ ಕಾರ್ಯಕ್ರಮ ಇದಾಗಿದೆ. ಕಳೆದ ತಿಂಗಳು ನಡೆಸಿದ ಟ್ರಾನ್ಸಫಾರ್ಮ್ ದುರಸ್ತಿ ಅಭಿಯಾನದಲ್ಲಿ ಎರಡು ಲಕ್ಷಕ್ಕೂ ಮೇಲ್ಪಟ್ಟು ಟಿಸಿ ನಿರ್ವಹಣೆ ಮಾಡಲಾಗಿದೆ. ಈಗ ವಿದ್ಯುತ್ ಅದಾಲತ್ ಮೂಲಕ ಗ್ರಾಮೀಣ ವಿದ್ಯುತ್ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವುದಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.
Related Articles
ಈ ಬಗ್ಗೆ ಜೂನ್ 5 ರಂದೇ ಇಂಧನ ಇಲಾಖೆಯಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.ಪ್ರತಿ ತಿಂಗಳ 3ನೇ ಶನಿವಾರ ಕಾರ್ಯಪಾಲಕ ಇಂಜಿನಿಯರ್ ಸೇರಿದಂತೆ ಎಲ್ಲ ಅಧಿಕಾರಿಗಳು ತಾಲೂಕಿನ ಕೊನೇ ಹಳ್ಳಿವರೆಗೆ ಭೇಟಿ ನೀಡಬೇಕು. ವಿದ್ಯುತ್ ಅದಾಲತ್ ಮಾಡಿ ಸಮಸ್ಯೆಗಳಿಗೆ ಪರಿಹಾರ ನೀಡಬೇಕು ಎಂದು ಅಧಿಕಾರಿಗಳಿಗೆ ಆದೇಶಿಸಲಾಗಿದೆ.
Advertisement
ಗ್ರಾಮೀಣ ಪ್ರದೇಶಗಳಲ್ಲಿನ ವಿದ್ಯುತ್ ಸಮಸ್ಯೆಗಳ ಬಗ್ಗೆ ಅರಿತು, ತಕ್ಷಣ ಪರಿಹಾರ ಮಾಡಲು ಆಂದೋಲನ ರೀತಿಯ ಕಾರ್ಯಕ್ರಮ ರೂಪಿಸಬೇಕು. ಪ್ರತಿ ತಿಂಗಳ 3ನೇ ಶನಿವಾರ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಸೇರಿದಂತೆ ಎಲ್ಲ ಅಧಿಕಾರಿಗಳು ತಾಲೂಕಿನ ಕೊನೇ ಹಳ್ಳಿವರೆಗೆ ಭೇಟಿ ನೀಡಬೇಕು. ವಿದ್ಯುತ್ ಅದಾಲತ್ ಮಾಡಿ ಸಮಸ್ಯೆಗಳಿಗೆ ಪರಿಹಾರ ನೀಡಬೇಕು ಎಂದು ಅಧಿಕಾರಿಗಳಿಗೆ ಆದೇಶಿಸಿದ್ದಾರೆ.
ಕಾರ್ಯಕ್ರಮದಲ್ಲಿ ವ್ಯವಸ್ಥಾಪಕ ನಿರ್ದೇಶಕರ ಮಟ್ಟದ ಅಧಿಕಾರಿಗಳಿಂದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ವರೆಗಿನ ಅಧಿಕಾರಿಗಳು ತಾಲೂಕಿನ ಕೊನೇ ಹಳ್ಳಿವರೆಗೆ ಹೋಗಿ, ಸಮಸ್ಯೆ ಆಲಿಸಿ, ಪರಿಹಾರ ನೀಡಬೇಕು. ಎಲ್ಲರೂ ಒಂದೇ ಹಳ್ಳಿಗೆ ಭೇಟಿ ನೀಡದೆ, ಬೇರೆ ಹಳ್ಳಿಗಳಿಗೆ ಭೇಟಿ ನೀಡಿ ಸಮಸ್ಯೆ ಬಗೆಹರಿಸಬೇಕು ಎಂದು ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ.
ಸಹಾಯಕ ಕಾರ್ಯಪಾಲಕ ಇಂಜಿನಿಯರ್ರಿಂದ ವ್ಯವಸ್ಥಾಪಕ ನಿರ್ದೇಶಕರ ಮಟ್ಟದ ಅಧಿಕಾರಿಗಳೂ ಅಭಿಯಾನದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು. ಆದ್ಯತೆ ಮೇರೆಗೆ ತಾಲೂಕಿನ ಗಡಿ ಭಾಗದ ಹಳ್ಳಿಗಳಿಂದ ಆರಂಭಿಸಿ, ಪ್ರತಿ ಹಳ್ಳಿಗೆ ಅಭಿಯಾನ ವಿಸ್ತರಿಸಬೇಕು ಎಂದು ಸೂಚಿಸಿದ್ದಾರೆ.
ವಿವಿಧ ಹಂತದ ಅಧಿಕಾರಿಗಳು ಒಂದೇ ಹಳ್ಳಿಗೆ ಭೇಟಿ ನೀಡದೆ, ಬೇರೆ ಹಳ್ಳಿಗಳಿಗೆ ಭೇಟಿ ನೀಡಿ, ಅಭಿಯಾನವನ್ನು ಕಾಲಮಿತಿಯಲ್ಲಿ ಮುಕ್ತಾಯಗೊಳಿಸಬೇಕು. ಅಭಿಯಾನದ ವಿವರಗಳನ್ನು ಪ್ರತಿ ತಿಂಗಳು ನಿಗದಿತ ನಮೂನೆಯಲ್ಲಿ ನಮೂದಿಸಿ, ಮಾಹಿತಿಯನ್ನು ಸಂಬಂಧಪಟ್ಟ ವ್ಯವಸ್ಥಾಪಕ ನಿರ್ದೇಶಕರಿಗೆ ಕಳುಹಿಸಬೇಕು. ವ್ಯವಸ್ಥಾಪಕ ನಿರ್ದೇಶಕರು ಪ್ರತಿ 3ನೇ ಸೋಮವಾರ ತಪ್ಪದೇ emg 1 energy@gpail.com ಇ-ಮೇಲ್ ಮೂಲಕ ಸರ್ಕಾರಕ್ಕೆ ಕಳುಹಿಸಬೇಕೆಂದು ಆದೇಶಿಸಿದ್ದಾರೆ.