Advertisement

ನಟ ವಿಷ್ಣುವರ್ಧನ್‌ ಸ್ಮಾರಕನಿರ್ಮಾಣಕ್ಕೆ ಮತ್ತೆ ವಿಘ್ನ

07:03 AM Feb 18, 2017 | |

ಮೈಸೂರು: ನಟ ವಿಷ್ಣುವರ್ಧನ್‌ ಸ್ಮಾರಕ ನಿರ್ಮಾಣಕ್ಕೆ ಮತ್ತೆ ವಿಘ್ನ ಎದುರಾಗಿದೆ. ಸ್ಮಾರಕ ನಿರ್ಮಿಸಲಾಗುತ್ತಿರುವ ಮೈಸೂರು ತಾಲೂಕಿನ ಹಾಲಾಳು ಗ್ರಾಮದ ಉದೂºರು ಕ್ರಾಸ್‌ ಬಳಿಯ ಭೂಮಿ ತಮ್ಮ ಸ್ವಾಧೀನದಲ್ಲಿದೆ ಎಂದು ನಾಲ್ವರು ರೈತರು ತಕರಾರು ತೆಗೆದಿದ್ದು, ನಗರದ ಸಿವಿಲ್‌ ನ್ಯಾಯಾಲಯದಿಂದ ತಾತ್ಕಾಲಿಕ ಪ್ರತಿಬಂಧಕಾಜ್ಞೆ ತಂದಿದ್ದಾರೆ.

Advertisement

ವಿಷ್ಣು ಸ್ಮಾರಕ ನಿರ್ಮಾಣಕ್ಕಾಗಿ ಗ್ರಾಮದ 5 ಎಕರೆ ಭೂಮಿಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ಜಿಲ್ಲಾಡಳಿತ
ಹಸ್ತಾಂತರಿಸಿದೆ. ಸ್ಮಾರಕ ನಿರ್ಮಾಣ ಸಂಬಂಧ ಸರ್ಕಾರ 5 ಕೋಟಿ ರೂ. ಮಂಜೂರು ಮಾಡಿದ್ದು, ಈಗಾಗಲೇ 2 ಕೋಟಿ ರೂ. ಬಿಡುಗಡೆ ಮಾಡಿದೆ. 2016ರ ಡಿಸೆಂಬರ್‌ 6ರಂದು ಸ್ಮಾರಕ ನಿರ್ಮಾಣಕ್ಕೆ ಭೂಮಿಪೂಜೆ ನಿಗದಿಯಾಗಿತ್ತು. ತಮಿಳುನಾಡು
ಸಿಎಂ ಜಯಲಲಿತಾ ನಿಧನದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಶೋಕಾಚರಣೆ ಘೋಷಣೆಯಾಗಿದ್ದರಿಂದ ಸರ್ಕಾರಿ ಕಾರ್ಯಕ್ರಮ ಕೂಡ ರದ್ದಾಯಿತು. ಬಳಿಕ, ಭಾರತಿ ವಿಷ್ಣುವರ್ಧನ್‌ ಭೂಮಿಪೂಜೆ ನೆರವೇರಿಸಿದ್ದರು. ಅಂದಿನಿಂದ ಸ್ಮಾರಕ ನಿರ್ಮಾಣ ಕಾಮಗಾರಿ ಭರದಿಂದ ಸಾಗಿತ್ತು. ಆದರೆ, ಗ್ರಾಮದ ಚನ್ನಪ್ಪ, ಹಾಗೂ ಇತರ ಮೂವರು ರೈತರು ಕಳೆದ 10 ವರ್ಷಗಳಿಂದ ಈ ಭೂಮಿ ತಮ್ಮ
ಸ್ವಾಧೀನದಲ್ಲಿದೆ ಎಂದು ವಾದಿಸಿ, ಸ್ಮಾರಕ ನಿರ್ಮಾಣಕ್ಕೆ ಭೂಮಿ ಬಿಟ್ಟು ಕೊಡಲು ಪ್ರತಿರೋಧ ವ್ಯಕ್ತಪಡಿಸಿದ್ದರು. ಈ ಬಗ್ಗೆ “ಉದಯವಾಣಿ’ ಜೊತೆ ಮಾತನಾಡಿದ ಮೈಸೂರು ತಾಲೂಕು ತಹಶೀಲ್ದಾರ್‌ ರಮೇಶ್‌ ಬಾಬು, ಸ್ಮಾರಕ ನಿರ್ಮಾಣಕ್ಕೆ 5 ಎಕರೆ 
ಭೂಮಿಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ಹಸ್ತಾಂತರಿಸಿದ ಜಿಲ್ಲಾಧಿಕಾರಿಗಳ ಆದೇಶಕ್ಕೆ ನ್ಯಾಯಾಲಯ ತಡೆಯಾಜ್ಞೆ ನೀಡಿಲ್ಲ. ಹೀಗಾಗಿ, ಸ್ಮಾರಕ ನಿರ್ಮಾಣ ಕಾಮಗಾರಿಯನ್ನು ಸ್ಥಗಿತಗೊಳಿಸಿಲ್ಲ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next