Advertisement
ಮಹಾಶಿವರಾತ್ರಿ ಪ್ರಯುಕ್ತ ಹನ ಗೋಡು ಹೋಬಳಿ ರಾಮೇನಹಳ್ಳಿ ಬೆಟ್ಟದ ಮೇಲಿನ ಓಂಕಾರೇಶ್ವರದೇವರ ರಥೋತ್ಸವ, ಕಲ್ಲೂರಪ್ಪನಗುಡ್ಡದಲ್ಲಿ ಕೊಂಡೋತ್ಸವ ನಡೆಯಿತು. ಕೊಳವಿಗೆ ರಾಮಲಿಂಗೇಶ್ವರ ದೇವಸ್ಥಾನ ಹಾಗೂ ಚಿಕ್ಕಹುಣಸೂರಿನ ಮಹದೇಶ್ವರ ದೇವಸ್ಥಾನದಲ್ಲಿ ಉತ್ಸವ ನಡೆದರೆ, ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಅನ್ನಸಂತರ್ಪಣೆ ನಡೆಯಿತು. ಈ ಎಲ್ಲಾ ದೇವಾಲಯಗಳೂ ಲಕ್ಷಣ ತೀರ್ಥ ನದಿ ತಟದಲ್ಲಿರುವುದು ವಿಶೇಷವಾಗಿದೆ.
Related Articles
Advertisement
ಕೊಳುವಿಗೆಯಲ್ಲಿ ರಾಮಲಿಂಗೇಶ್ವರ ಉತ್ಸವ: ಹನಗೋಡಿಗೆ ಸಮೀಪ ನಾಗರಹೊಳೆ ರಾಷ್ಟ್ರೀಯ ಉದ್ಯಾನ ವನಕ್ಕಂಟಿಕೊಂಡಿರುವ ಕೊಳುವಿಗೆಯ ಲಕ್ಷಣತೀರ್ಥನದಿದಂಡೆಯಲ್ಲಿರುವ ಶ್ರೀ ರಾಮಲಿಂಗೇಶ್ವರ ದೇವಾಲಯ ದಲ್ಲಿ ಜಾಗರಣೆ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು, ಶನಿವಾರ ಬೆಳಗ್ಗೆ ದೇವರ ಉತ್ಸವ ನಡೆಯಿತು. ಮಧ್ಯಾಹ್ನ ಅನ್ನದಾಸೋಹ ನಡೆಯಿತು. ಸುತ್ತ ಮುತ್ತಲ ಗ್ರಾಮಗಳು ಹಾಗೂ ಹಾಡಿಗಳಿಂದ ಸಾವಿರಾರು ಮಂದಿ ಭಾಗವಹಿಸಿದ್ದರು.
ಕಲ್ಲೂರೇಶ್ವರ ಜಾತ್ರೆ: ನಾಗರಹೊಳೆ ಉದ್ಯಾನದಂಚಿನಲ್ಲಿರುವ ಸಮಿಪದ ಮಾದಳ್ಳಿಯ ಕಲ್ಲೂರಪ್ಪನಬೆಟ್ಟದಲ್ಲಿ ಕಲ್ಲುಬಂಡೆಗಳ ನಡುವೆ ವಿರಾಜಮಾನವಾಗಿರುವ ಕಲ್ಲೂರೇಶ್ವರಸ್ವಾಮಿಗೆ ಹಬ್ಬದಂದು ವಿಶೇಷ ಪೂಜೆ ಸಲ್ಲಿಸ ಲಾಯಿತು. ಜಾಗರಣೆ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮ ನಡೆೆಯಿತು. ಶನಿವಾರ ಬೆಳಿಗ್ಗೆ ದೀವಟಿಕೆ ಪೂಜೆ ಬಳಿಕ ಕೊಂಡೊತ್ಸವ ನಡೆಸಲಾಯಿತು.