Advertisement

Mangaluru: ಶಾಲೆಗಳಲ್ಲಿ ಕಟ್ಟೆಚ್ಚರ; ಪಾರ್ಸೆಲ್‌ ಮೇಲೆ ನಿಗಾ: ಡಿಸಿ ಸೂಚನೆ

01:52 AM Dec 07, 2024 | Team Udayavani |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಾಂಜಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ ಗಾಂಜಾವನ್ನು ಸಂಪೂರ್ಣವಾಗಿ ನಿಷೇಧಿಸಲು ಎಲ್ಲಾ ಇಲಾಖೆಗಳು ಜಂಟಿಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಸೂಚನೆ ನೀಡಿದ್ದಾರೆ.

Advertisement

ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ಸಂಬಂಧ ಶುಕ್ರವಾರ ನಡೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಜಿಲ್ಲೆಯಲ್ಲಿ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಡ್ರಗ್ಸ್‌ ಚಟದಲ್ಲಿ ಭಾಗಿಯಾಗಿರುವುದು ಕಳವಳಕಾರಿ. ಡ್ರಗ್ಸ್‌ ಜಾಲವನ್ನು ಸಂಪೂರ್ಣವಾಗಿ ನಿಷೇಧಿ ಸಲು ಶಿಕ್ಷಣ ಸಂಸ್ಥೆಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಶಾಲಾ ಮಟ್ಟದಲ್ಲಿಯೇ ಆಂತರಿಕವಾಗಿ ನೋಡಲ್‌ ಆಫೀಸರ್‌, ಆಪ್ತ ಸಮಾಲೋಚಕರನ್ನು ನೇಮಿಸಿ ವಿದ್ಯಾರ್ಥಿಗಳ ಚಲನವಲನಗಳನ್ನು ಗಮನಿಸಬೇಕು.

ಡ್ರಗ್ಸ್‌ ವ್ಯಸನಿಯಾಗಿದ್ದಲ್ಲಿ ಆಪ್ತ ಸಮಾಲೋಚನೆಯನ್ನು ಮಾಡಿ ವಿದ್ಯಾರ್ಥಿಗಳ ಮನಃಪರಿವರ್ತಿಸಬೇಕು. ವಿದ್ಯಾರ್ಥಿಗೆ ಯಾವ ಮೂಲದಿಂದ ಡ್ರಗ್‌ ಸಿಗುತ್ತಿದೆ ಎಂಬ ಬಗ್ಗೆ ಹೆಚ್ಚಿನ ತನಿಖೆಗೆ ಪೊಲೀಸರಿಗೆ ಮಾಹಿತಿ ನೀಡ ಬೇಕು ಎಂದು ಅವರು ಸೂಚಿಸಿದರು.

ಶಾಲಾ ಕಾಲೇಜುಗಳ ಹೆಸರಿಗೆ ಧಕ್ಕೆ ಉಂಟಾಗಬಹುದು ಎಂದು ಪ್ರಕರಣವನ್ನು ಮುಚ್ಚಿಡಬಾರದು ಎಂದ ಅವರು, ಶಾಲಾ ಕಾಲೇಜುಗಳಿಗೆ ಆಗಿಂದಾಗ್ಗೆ ಭೇಟಿ ನೀಡಿ ವಿದ್ಯಾರ್ಥಿ ಗಳನ್ನು ತಪಾಸಣೆಗೆ ಒಳಪಡಿಸಬೇಕು. ಅಂಚೆ ಕಚೇರಿಗೆ ಬರುವ ಪಾರ್ಸೆಲ್‌ಗ‌ಳು ಅನುಮಾನಾಸ್ಪದವಾಗಿ ತೋರಿ ಬಂದರೆ, ಪದೇ ಪದೇ ಒಂದೇ ರೀತಿಯಲ್ಲಿ ಪಾರ್ಸೆಲ್‌ಗ‌ಳು ಬರುತ್ತಿದ್ದರೆ ಕೂಡಲೇ ಪೊಲೀಸ್‌ ಇಲಾಖೆಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.

ಅರಣ್ಯ ಪ್ರದೇಶಗಳಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆಯುತ್ತಿದ್ದಾರೆಯೇ ಎಂಬ ಬಗ್ಗೆ ಅರಣ್ಯ ಇಲಾಖೆ ಯವರು ತಪಾಸಣೆ ನಡೆಸಬೇಕು. ವಾಟ್ಸ್‌ ಆ್ಯಪ್‌ ಗ್ರೂಪ್‌ಗ್ಳನ್ನು ರಚಿಸಿ, ವೇಳಾಪಟ್ಟಿ ರಚಿಸಿ ಡ್ರಗ್ಸ್‌ ನಿರ್ಮೂಲನೆ ಮಾಡಲು ಕೈಗೊಳ್ಳಬೇಕಾದ ಕ್ರಮಗಳನ್ನು ಚರ್ಚಿಸಿ ಕಾರ್ಯರೂಪಕ್ಕೆ ತರಬೇಕು ಅವರು ಅಧಿಕಾರಿಗಳಿಗೆ ತಿಳಿಸಿದರು.

Advertisement

ಎಲ್ಲ ಬಸ್‌ ಚಾಲಕ, ನಿರ್ವಾಹಕರು ಗಳಿಗೆ ಡ್ರಗ್ಸ್‌ ಬಗ್ಗೆ ಜಾಗೃತಿಯನ್ನು ಮೂಡಿ ಸಲು ಆರ್‌ಟಿಒ ಇಲಾಖೆಯಿಂದ ಸಭೆ ನಡೆಸಬೇಕು. ಬಸ್‌ಗಳಲ್ಲಿ ಡ್ರಗ್ಸ್‌ ಬಗ್ಗೆ ಜಾಗೃತಿ ಮೂಡಿಸುವ ಬಿತ್ತಿ ಪತ್ರಗಳನ್ನು ಅಂಟಿಸಬೇಕು. ಸಹಾಯವಾಣಿ ಸಂಖ್ಯೆ ನಂಬರ್‌ 1933 ಅನ್ನು ಅದರಲ್ಲಿ ನಮೂದಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ಎಸ್‌ಪಿ ಯತೀಶ್‌, ಡಿಸಿಪಿ, ಸಿದ್ದಾರ್ಥ್ ಗೋಯಲ್‌ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next