Advertisement

ಕರಾವಳಿಯಲ್ಲಿ ಜೋರಾದ ಗಾಳಿ ಬೀಸುವ ಹಿನ್ನೆಲೆ: ಕಡಲು ಪ್ರಕ್ಷುಬ್ಧ

11:06 PM Jun 17, 2019 | Team Udayavani |

ಮಂಗಳೂರು/ಬೆಂಗಳೂರು: ಸೋಮವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ರಾಜ್ಯ ಕರಾವಳಿಯ ಹೆಚ್ಚಿನ ಕಡೆ, ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಇತ್ತು.

Advertisement

ಸುಬ್ರಹ್ಮಣ್ಯದಲ್ಲಿ 3 ಸೆಂ.ಮೀ., ಉಪ್ಪಿನಂಗಡಿ, ಪಂಚನಹಳ್ಳಿಯಲ್ಲಿ ತಲಾ 1 ಸೆಂ.ಮೀ.ಮಳೆ ಸುರಿದಿದೆ. ಬುಧವಾರ ಮುಂಜಾನೆವರೆಗಿನ ಹವಾಮಾನ ಮುನ್ಸೂಚನೆಯಂತೆ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಗುಡುಗು ಮಿಂಚಿನಿಂದ ಕೂಡಿದ ಮಳೆ ಬರುವ ಸಾಧ್ಯತೆಯಿದೆ.

ರಾಜ್ಯದ ಕರಾವಳಿಯಲ್ಲಿ ಜೂ.18ರ ಮಧ್ಯರಾತ್ರಿಯ ತನಕ ನೈಋತ್ಯ ದಿಕ್ಕಿನಿಂದ ತಾಸಿಗೆ 35ರಿಂದ 45 ಕಿ.ಮೀ.ವೇಗದಲ್ಲಿ ಬಲವಾದ ಗಾಳಿ ಬೀಸುವ ಹಿನ್ನೆಲೆಯಲ್ಲಿ ಕಡಲು ಪ್ರಕ್ಷುಬ್ಧಗೊಳ್ಳಲಿದೆ. ಹಾಗಾಗಿ, ಮೀನುಗಾರರು ಸಮುದ್ರಕ್ಕೆ ಇಳಿಯಬಾರದು.

ಇದೇ ಅವಧಿಯಲ್ಲಿ ಕಡಲುಬ್ಬರವೂ ಇರುವುದರಿಂದ ಸಮುದ್ರದಲ್ಲಿ ಸಾಮಾನ್ಯಕ್ಕಿಂತ ಎತ್ತರದ ಅಲೆಗಳು ಏಳಲಿದ್ದು, ತೀರ ಪ್ರದೇಶದ ಜನರು ಮುನ್ನೆಚ್ಚರಿಕೆ ವಹಿಸಬೇಕು. ಉಬ್ಬರದಲೆಗಳಿಂದ ಕಡಲ್ಕೊರೆತ ಉಂಟಾಗುವ ಸಾಧ್ಯತೆಯೂ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next