ಮಂಗಳೂರು: ವಿಶ್ವ ಹಿಂದೂ ಪರಿಷತ್ತಿನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮಿಲಿಂದ್ ಪರಾಂಡೆ ಅವರು ರವಿವಾರ ಮಂಗಳೂರಿಗೆ ಆಗಮಿಸಿದ್ದು, ವಿಭಾಗ ಪದಾಧಿಕಾರಿಗಳ ಅಭ್ಯಾಸ ವರ್ಗದಲ್ಲಿ ಅವರು ಪಾಲ್ಗೊಂಡರು.
ಬಳಿಕ ಅವರು ಶಕ್ತಿ ರೆಸಿಡೆನ್ಶಿಯಲ್ ಶಾಲೆಯಲ್ಲಿ ಮಂಗಳೂರಿನ ವಿವಿಧ ವಿವಿಧ ಕ್ಷೇತ್ರಗಳ ಪ್ರಮುಖ ಗಣ್ಯರೊಂದಿಗೆ ಸಂವಾದ ಸಭೆಯಲ್ಲಿ ಪಾಲ್ಗೊಂಡರು.
ಇದೇ ಸಂದರ್ಭದಲ್ಲಿ ಮಿಲಿಂದ್ ಪರಾಂಡೆ ಅವರು ವಿಶ್ವ ಹಿಂದೂ ಪರಿಷತ್ತಿನ ವಿಭಾಗ ಪದಾಧಿಕಾರಿಗಳಿಗೆ ಮಾರ್ಗದರ್ಶನ ನೀಡಿದರು.
ಬಳಿಕ ಕಾಲೇಜಿನ ವಿದ್ಯಾರ್ಥಿ ಗಳೊಂದಿಗೆ “ಭಾರತವನ್ನು ವಿಶ್ವ ಗುರುವಾಗಿ ನಿರ್ಮಿಸುವಲ್ಲಿ ಯುವಕರ ಪಾತ್ರ’ ಎಂಬ ವಿಷಯ ಬಗ್ಗೆ ಉಪನ್ಯಾಸ ನೀಡಿ, ಯುವ ಸಮುದಾಯದಲ್ಲಿ ರಾಷ್ಟ್ರಭಕ್ತಿಯನ್ನು ಜಾಗೃತಗೊಳಿಸಿದರು.
ವಿಹಿಂಪ ಜಿಲ್ಲಾಧ್ಯಕ್ಷ ಎಚ್.ಕೆ.ಪುರುಷೋತ್ತಮ, ಶಕ್ತಿ ಸಮೂಹ ಸಂಸ್ಥೆಯ ಅಧ್ಯಕ್ಷ ಡಾ| ಕೆ.ಸಿ. ನಾೖಕ್, ಶಾರದಾ ವಿದ್ಯಾ ಸಂಸ್ಥೆಯ ಅಧ್ಯಕ್ಷ ಪ್ರೊ| ಎಂ.ಬಿ.ಪುರಾಣಿಕ್, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮಂಗಳೂರು ಮಹಾನಗರ ಸಂಘಚಾಲಕ್ ಡಾ| ಸತೀಶ್ ರಾವ್ ಸಹಿತ ಪ್ರಮುಖರು ಉಪಸ್ಥಿತರಿದ್ದರು.