Advertisement

ಕೊಟ್ಟಿಗೆಹಾರ: ಬಿ ಹೊಸಳ್ಳಿ ರಸ್ತೆಗಳ ಅಭಿವೃದ್ದಿಗೆ ಒತ್ತಾಯಿಸಿ ಪ್ರತಿಭಟನೆ

05:42 PM Apr 11, 2022 | Team Udayavani |

ಕೊಟ್ಟಿಗೆಹಾರ: ಬಿ ಹೊಸಹಳ್ಳಿ ಗ್ರಾ.ಪಂ ವ್ಯಾಪ್ತಿಯ ರಸ್ತೆಗಳ ಅಭಿವೃದ್ದಿಗೆ ಆಗ್ರಹಿಸಿ ಬಿ ಹೊಸಹಳ್ಳಿ ಗ್ರಾಮಸ್ಥರು ಬಿ.ಹೊಸಹಳ್ಳಿ ಭಾರತಿಬೈಲ್ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.

Advertisement

ಬಿ.ಹೊಸಳ್ಳಿ ಗ್ರಾ.ಪಂ ಸದಸ್ಯ ಆಶ್ರಿತ್ ಮಾತನಾಡಿ, ಚಕಮಕ್ಕಿಯಿಂದ ಭಾರತಿಬೈಲು ಸಂಪರ್ಕಿಸುವ ರಸ್ತೆ ಸೇರಿದಂತೆ ವಿವಿಧ ರಸ್ತೆಗಳು ಸಂಪೂರ್ಣ ಹಾಳಾಗಿದ್ದು ಸುಮಾರು 2 ದಶಕಗಳಿಂದ ರಸ್ತೆ ಅಭಿವೃದ್ದಿಯಾಗಿಲ್ಲ. ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸಾರ್ವಜನಿಕರಿಗೆ ತೊಂದರೆಯಾಗಿದ್ದು ಕೂಡಲೇ ರಸ್ತೆ ಅಭಿವೃದ್ದಿ ಪಡಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಮಾಜಿ ಸಚಿವೆ ಮೋಟಮ್ಮ ಮಾತನಾಡಿ ಅತಿವೃಷ್ಟಿ ಸಂದರ್ಭದಲ್ಲಿ ನೆರೆ ಹಾನಿ ಕಾಮಗಾರಿಗೆ ಬಂದ ಕೋಟ್ಯಾಂತರ ರೂ ಅನುದಾನ ಯಾವ ಗ್ರಾಮಗಳಿಗೆ ಬಳಕೆಯಾಗಿದೆ ಎಂಬುದನ್ನು ಸಂಬಂಧಪಟ್ಟವರು ಸ್ಪಷ್ಟಪಡಿಸಬೇಕು. ಗ್ರಾಮೀಣ ಭಾಗದ ರಸ್ತೆ ಸಂಪರ್ಕ ಸರಿಪಡಿಸಲು ಮುಂದಾಗಬೇಕು ಎಂದರು.

ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಮಾಜಿ ಸಚಿವ ಬಿ.ಬಿ ನಿಂಗಯ್ಯ, ಚುನಾಯಿತ ಸರ್ಕಾರ ಬಿ ಹೊಸಳ್ಳಿ ಗ್ರಾಮದ ರಸ್ತೆ ಅಭಿವೃದ್ದಿಗೆ ಮುಂದಾಗಬೇಕು. ಕಾಫಿ ಬೆಳೆಗಾರರು, ವಿದ್ಯಾರ್ಥಿಗಳು, ಕಾರ್ಮಿಕರು ಹೆಚ್ಚಿರುವ ಈ ಗ್ರಾಮದ ರಸ್ತೆ ಅಭಿವೃದ್ದಿ ಮಾಡಬೇಕಿದೆ ಎಂದರು.

ಬಿಜೆಪಿ ಮುಖಂಡರಾದ ದೀಪಕ್ ದೊಡ್ಡಯ್ಯ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿ ಸ್ಥಳದಲ್ಲಿಯೇ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿ ಶೀಘ್ರವಾಗಿ ರಸ್ತೆ ಅಭಿವೃದ್ದಿ ಮಾಡುವಂತೆ ತಿಳಿಸಿದರು.

Advertisement

ನಂತರ ಮಾತನಾಡಿದ ಅವರು, ರಸ್ತೆ ಅಭಿವೃದ್ದಿಗೆ ಸಂಬಅಧಪಟ್ಟಅತೆ ಅಧಿಕಾರಿಗಳೊಂದಿಗೆ ಮಾತನಾಡಿದ್ದು ರಸ್ತೆ ಅಭಿವೃದ್ದಿಗೆ ಮುಂದಾಗದಿದ್ದರೇ ಮುಂದಿನ ದಿನಗಳಲ್ಲಿ ಪ್ರತಿಭಟನೆ ನಿರತರ ಹೋರಾಟಕ್ಕೆ ಬೆಂಬಲ ಸೂಚಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಗ್ರಾ.ಪಂ ಉಪಾಧ್ಯಕ್ಷೆ ಸರಸ್ವತಿ, ಯೋಗೇಶ್, ಬಸವರಾಜ್, ಪ್ರವೀಣ್, ಸುರೇಶ್,  ಶಿವಕುಮಾರ್, ಸಂತೋಷ್, ಗ್ರಾಮಸ್ಥರಾದ ಅರ್ಜುನ್, ಅಣ್ಣಪ್ಪ, ಗಣೇಶ್,ವರುಣ್, ಆದರ್ಶ್,ಪ್ರಸನ್ನ, ರಮೇಶ್, ದಿನೇಶ್ ಮುಂತಾದವರು ಇದ್ದರು.

‘ಶಾಸಕ ಎಂ.ಪಿ.ಕುಮಾರಸ್ವಾಮಿ ಅವರು ಬಿ ಹೊಸಳ್ಳಿ ಕಾಲೋನಿಗೆ 20 ಲಕ್ಷ, ಬಿ ಹೊಸಳ್ಳಿ ಭಾರತಿಬೈಲ್ ಸಂಪರ್ಕ ರಸ್ತೆಗೆ 50 ಲಕ್ಷ ಅನುದಾನ ಬಿಡುಗಡೆಯಾಗಿದ್ದು ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ತಿಳಿಸಿದ್ದಾರೆ. ಗ್ರಾಮದ ಕೆಲ ವ್ಯಕ್ತಿಗಳು ರಸ್ತೆ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದು ಗ್ರಾಮದ ಅಭಿವೃದ್ದಿಗೆ ಪಕ್ಷಾತೀತವಾಗಿ ಸಹಕಾರ ನೀಡುತ್ತೇವೆ.’-ಮಂಜುನಾಥಗೌಡ, ಮಾಜಿ ಪ್ರಧಾನರು,ಬಿ.ಹೊಸಹಳ್ಳಿ.

Advertisement

Udayavani is now on Telegram. Click here to join our channel and stay updated with the latest news.

Next